Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:8 - ಕನ್ನಡ ಸತ್ಯವೇದವು J.V. (BSI)

8 [ದೇಶವೇ,] ತನ್ನ ಯೌವನಕಾಲದ ಪತಿಯ ವಿಯೋಗದುಃಖದಿಂದ ಗೋಣಿತಟ್ಟನ್ನುಟ್ಟುಕೊಂಡು ಗೋಳಾಡುವ ಯುವತಿಯಂತೆ ಗೋಳಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮದುವೆಯಾಗಲಿದ್ದ ಯುವಕನನ್ನು ಕಳೆದುಕೊಂಡದ್ದಕ್ಕಾಗಿ ಗೋಣಿತಟ್ಟನ್ನು ಉಟ್ಟು ಗೋಳಾಡುವ ಯುವತಿಯಂತೆ ರೋದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮದುಮಗನು ಸತ್ತುಹೋದಾಗ ಮದುಮಗಳು ಗೋಳಾಡುವಂತೆ ನೀವು ಗೋಳಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:8
13 ತಿಳಿವುಗಳ ಹೋಲಿಕೆ  

ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;


ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ.


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ಈಗತಾನೆ ನನ್ನನ್ನು - ನನ್ನ ತಂದೆ, ನನ್ನ ಯೌವನದ ಆಪ್ತನು ಎಂದು ಕರೆಯುತ್ತೀಯಲ್ಲಾ.


ನಿಶ್ಚಿಂತೆಯವರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ ಬೆತ್ತಲೆಯಾಗಿ ಸೊಂಟಕ್ಕೆ [ಗೋಣಿತಟ್ಟನ್ನು] ಸುತ್ತಿಕೊಳ್ಳಿರಿ.


ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳಷ್ಟೆ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು