Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:10 - ಕನ್ನಡ ಸತ್ಯವೇದವು J.V. (BSI)

10 ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:10
22 ತಿಳಿವುಗಳ ಹೋಲಿಕೆ  

ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಆಕಾಶದ ತಾರೆಗಳೂ ನಕ್ಷತ್ರರಾಶಿಗಳೂ ಬೆಳಗವು, ಸೂರ್ಯನು ಮೂಡುತ್ತಲೇ ಕತ್ತಲಾಗುವನು, ಚಂದ್ರನು ಪ್ರಕಾಶಿಸನು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂವಿುಯು ಗಡಗಡನೆ ಕಂಪಿಸಿತು; ಪರ್ವತಗಳ ಬುಡಗಳು ನಡುಗಿ ಕದಲಿದವು.


ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;


ನಾನು [ದಿವ್ಯಜ್ಞಾನದಿಂದ] ನೋಡಿದೆನು, ಹಾ, ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ನಕ್ಷತ್ರಸೈನ್ಯವೆಲ್ಲಾ ಕ್ಷಯಿಸುವದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವದು; ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.


ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;


ಕೃತ್ತಿಕೆಯನ್ನೂ ಮೃಗಶಿರವನ್ನೂ ಸೃಷ್ಟಿಸಿ ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ ಹಗಲನ್ನು ಇರುಳಿಗೆ ಮಾರ್ಪಡಿಸಿ ಸಾಗರದ ಜಲವನ್ನು ಬರಮಾಡಿಕೊಂಡು ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ; ಯೆಹೋವನೆಂಬದೇ ಆತನ ನಾಮಧೇಯ;


ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ತೂರೇ, ಚೀದೋನೇ, ಫಿಲಿಷ್ಟಿಯ ರಾಷ್ಟ್ರಗಳೇ, ನನ್ನ ಗೊಡವೆ ನಿಮಗೇಕೆ? ನನಗೆ ಪ್ರತೀಕಾರಮಾಡುವಿರೋ? ಸುಮ್ಮನೆ ತಂಟೆಮಾಡುವಿರೋ? ನೀವು ಮಾಡುವ ಕೇಡನ್ನು ತ್ವರೆಯಾಗಿ, ಶೀಘ್ರವಾಗಿ ನಿಮ್ಮ ತಲೆಗೇ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು