ಯೋಯೇಲ 2:20 - ಕನ್ನಡ ಸತ್ಯವೇದವು J.V. (BSI)20 ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |