Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:21 - ಕನ್ನಡ ಸತ್ಯವೇದವು J.V. (BSI)

21 ಭೂವಿುಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು; ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಭೂನಿವಾಸಿಗಳೇ, ಭಯಪಡಬೇಡಿರಿ; ಹರ್ಷಿಸಿ ಆನಂದಿಸಿರಿ. ಸರ್ವೇಶ್ವರ ಮಹತ್ಕಾರ್ಯಗಳನ್ನು ಎಸಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇಶವೇ, ಭಯಪಡದಿರು. ಯೆಹೋವನು ಮಹತ್ಕಾರ್ಯವನ್ನು ಮಾಡಲಿರುವದರಿಂದ ಸಂತೋಷದಿಂದ ಆನಂದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:21
21 ತಿಳಿವುಗಳ ಹೋಲಿಕೆ  

ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಅರಣ್ಯವೂ ಮರುಭೂವಿುಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವದು.


ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.


ಈ ಕಾಲದಲ್ಲಿ ಯೆರೂಸಲೇವಿುಗೂ ಯೆಹೂದ ಕುಲಕ್ಕೂ ಮೇಲು ಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.


ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು.


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ದೇವರು ಮನುಷ್ಯರನ್ನು ಸೃಷ್ಟಿಸಿ ಭೂವಿುಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಅಂಥ ದೊಡ್ಡ ಕಾರ್ಯವು ನಡೆದದ್ದುಂಟೋ, ಇಲ್ಲವೆ ಅಂಥದರ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ನದಿಗಳು ಚಪ್ಪಾಳೆಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ಕೃತ್ಯಗಳನ್ನು ನಡಿಸಿದ ದೇವರೇ, ನಿನಗೆ ಸಮಾನರು ಯಾರು?


ನೀವು ಹೊಟ್ಟೆತುಂಬಾ ಊಟಮಾಡಿ ತೃಪ್ತಿಗೊಂಡು ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ; ನನ್ನ ಜನರು ಎಂದಿಗೂ ಆಶಾಭಂಗಪಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು