Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:22 - ಕನ್ನಡ ಸತ್ಯವೇದವು J.V. (BSI)

22 ಭೂಜಂತುಗಳೇ, ಅಂಜಬೇಡಿರಿ; ಕಾಡಿನ ಕಾವಲಲ್ಲಿ ಹುಲ್ಲು ಮೊಳೆಯುವದು, ಮರವು ಹಣ್ಣುಬಿಡುವದು, ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:22
25 ತಿಳಿವುಗಳ ಹೋಲಿಕೆ  

ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ಮೇವುಗಾಡುಗಳು ಹಚ್ಚಗೆ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.


ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.


ಭೂವಿುಯು ಒಳ್ಳೇ ಬೆಳೆಯನ್ನು ಕೊಟ್ಟಿರುತ್ತದೆ. ದೇವರು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು;


ಹೀಗಿರಲಾಗಿ ನೆಡುವವನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.


ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.


ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು.


ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.


ನೀವು ಕ್ಷಾಮದೇಶದವರೆಂದು ಜನಾಂಗಗಳು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವವು; ಅವರ ಬರುವಿಕೆಯು ಸಮೀಪವಾಯಿತು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.


ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು.


ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದೆದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು