ಯೋಯೇಲ 2:23 - ಕನ್ನಡ ಸತ್ಯವೇದವು J.V. (BSI)23 ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು. ಅಧ್ಯಾಯವನ್ನು ನೋಡಿ |