Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:26 - ಕನ್ನಡ ಸತ್ಯವೇದವು J.V. (BSI)

26 ನೀವು ಹೊಟ್ಟೆತುಂಬಾ ಊಟಮಾಡಿ ತೃಪ್ತಿಗೊಂಡು ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ; ನನ್ನ ಜನರು ಎಂದಿಗೂ ಆಶಾಭಂಗಪಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:26
41 ತಿಳಿವುಗಳ ಹೋಲಿಕೆ  

ಆತನ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದಿಲ್ಲವೆಂದು ಶಾಸ್ತ್ರವು ಹೇಳುತ್ತದೆಯಷ್ಟೆ.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ನಿಮ್ಮ ಅಂತರಾತ್ಮವು ಯಾವಾಗಲೂ ಚೈತನ್ಯವುಳ್ಳದ್ದಾಗಿರಲಿ.


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಕಣತುಳಿಸುವ ಕೆಲಸವು ದ್ರಾಕ್ಷೆಯಬೆಳೆಯ ಪರ್ಯಂತರವೂ ದ್ರಾಕ್ಷೆಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವವು; ನೀವು ಸಮೃದ್ಧಿಯಾಗಿ ಊಟಮಾಡುವಿರಿ. ನಿಮ್ಮ ದೇಶದಲ್ಲಿ ನಿರ್ಭಯವಾಗಿ ವಾಸಮಾಡುವಿರಿ;


ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಇಗೋ, ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದಿಲ್ಲವೆಂತಲೂ ಶಾಸ್ತ್ರದಲ್ಲಿ ಬರೆದದೆಯಲ್ಲಾ. ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು.


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ - ಯಾಕೋಬ್ಯರು ಇನ್ನು ನಾಚಿಕೆಗೆ ಈಡಾಗರು, ಅವರ ಮುಖವು ಇನ್ನು ಬಾಡದು,


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಶಿಷ್ಟನು ಹೊಟ್ಟೆತುಂಬಾ ಉಣ್ಣುವನು; ದುಷ್ಟನ ಹೊಟ್ಟೆ ಹಸಿದಿರುವದು.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ಶ್ರೇಷ್ಠವರಗಳಿಂದ ನಿನ್ನ ಆಶೆಯನ್ನು ಪೂರ್ತಿಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರಿಗಿ ಬರಮಾಡುತ್ತಾನೆ.


ಮಹತ್ಕಾರ್ಯಗಳನ್ನು ನಡಿಸುವದರಲ್ಲಿ ಅದ್ವಿತೀಯನೂ ಇಸ್ರಾಯೇಲ್ಯರ ದೇವರೂ ಆದ ಯೆಹೋವ ದೇವರಿಗೆ ಸ್ತೋತ್ರವು.


ಅವರಿಗೆ ವಿಪತ್ಕಾಲದಲ್ಲಿಯೂ ಆಶಾಭಂಗವಾಗುವದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿಲ್ಲ.


ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.


ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ನೀವು ಹೊಟ್ಟೆತುಂಬಾ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟದ್ದಕ್ಕಾಗಿ ಆತನನ್ನು ಸ್ತುತಿಸಬೇಕು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ನೀನು ಉಂಡರೂ ನಿನಗೆ ತೃಪ್ತಿಯಾಗದು; ಹಸಿವೆಯು ನಿನ್ನೊಳಗೆ ಇದ್ದೇ ಇರುವದು; ನೀನು [ನಿನ್ನವರನ್ನು] ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ; ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.


ಅಡವಿಯಲ್ಲಿ ದನಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.


ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.


ನಿಮ್ಮ ಭೂವಿುಯು ಫಲವತ್ತಾಗುವದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ, ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು