Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:27 - ಕನ್ನಡ ಸತ್ಯವೇದವು J.V. (BSI)

27 ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿದ್ದೇನೆಂತಲೂ ಅದ್ವಿತೀಯನಾದ ನಾನೇ ನಿಮ್ಮ ದೇವರಾದ ಯೆಹೋವನಾಗಿದ್ದೇನೆಂತಲೂ ನಿಮಗೆ ನಿಶ್ಚಯವಾಗುವದು; ನನ್ನ ಜನರು ಎಂದಿಗೂ ಆಶಾಭಂಗಪಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:27
31 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ ಆಮೇಲೆ ಒಟ್ಟುಗೂಡಿಸಿ ಸ್ವದೇಶಕ್ಕೆ ತಂದದರಿಂದ ನಾನೇ ತಮ್ಮ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು.


ನೀವು ಹೊಟ್ಟೆತುಂಬಾ ಊಟಮಾಡಿ ತೃಪ್ತಿಗೊಂಡು ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ; ನನ್ನ ಜನರು ಎಂದಿಗೂ ಆಶಾಭಂಗಪಡರು.


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವದಕ್ಕೂ ಶತ್ರುಗಳನ್ನು ನಿಮ್ಮ ಕೈವಶಮಾಡುವದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದದರಿಂದ ಪಾಳೆಯವು ನಿರ್ಮಲವಾಗಿರಬೇಕು; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,


ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆಯಲ್ಪಟ್ಟದ್ದು, ಮಾನ್ಯವಾದದ್ದು; ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ ಎಂದು ಶಾಸ್ತ್ರದಲ್ಲಿ ಬರೆದದೆ.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ಮೂಡಲಿಂದ ಪಡುವಲ ತನಕ ಇರುವವರೆಲ್ಲರೂ ಇದನ್ನು ನೋಡಿ ನನ್ನ ವಿನಹ ಯಾರೂ ಇಲ್ಲ, ನಾನೇ ಯೆಹೋವನು,


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮವನ್ನು ಹೊದಿಸಿ ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.


ಅವುಗಳಲ್ಲಿ ಹತರಾದವರನ್ನು ನಿರ್ದೋಷಿಗಳೆಂದು ನಾನು ಬಹುಕಾಲ ನಿರ್ಣಯಿಸದೆ ಬಿಟ್ಟಿದ್ದೆನು, ಇನ್ನು ನಿರ್ಣಯಿಸುವೆನು; ಯೆಹೋವನು ಚೀಯೋನಿನಲ್ಲಿ ನೆಲೆಯಾಗಿಯೇ ಇದ್ದಾನೆ.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಅದಕ್ಕೆ ಮೋಶೆ - ನನ್ನ ಗೌರವವನ್ನು ಕಾಪಾಡಬೇಕೆಂದಿದ್ದೀಯೇ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮೀಯವರಗಳನ್ನು ಹೊಂದಿದವರೂ ಪ್ರವಾದಿಸುವರೂ ಆದರೆ ಎಷ್ಟೋ ಒಳ್ಳೇದು ಅಂದನು.


ಯಾಕೋಬ್ಯರಲ್ಲಿ ಯಾವ ಆಪತ್ತಿನ ಸೂಚನೆಯೂ ಇಲ್ಲ; ಇಸ್ರಾಯೇಲ್ಯರಿಗೆ ವಿಪತ್ತು ಸಂಭವಿಸುವ ಹಾಗೆ ತೋರುವದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡಲೇ ಇದ್ದಾನೆ; ಅವರು ತಮ್ಮ ಅರಸನಿಗೋಸ್ಕರ ಮಾಡುವ ಜಯಘೋಷವು ಕೇಳಿಸುತ್ತಲೇ ಇದೆ.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು