Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:3 - ಕನ್ನಡ ಸತ್ಯವೇದವು J.V. (BSI)

3 ಅದರ ಮುಂಗಡೆ ಬೆಂಕಿಯು ನುಂಗಿಕೊಂಡು ಬರುತ್ತದೆ, ಹಿಂಗಡೆ ಜ್ವಾಲೆಯು ಧಗಧಗಿಸುತ್ತದೆ; ಅದು ಬರುವದಕ್ಕೆ ಮುಂಚೆ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ದಾಟಿಹೋದ ಮೇಲೆ ಬೆಗ್ಗಾಡಾಗಿದೆ; ಅದಕ್ಕೆ ಯಾವದೂ ತಪ್ಪಿಸಿಕೊಳ್ಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು. ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು ಸೈನ್ಯವು ಬಂದ ಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:3
21 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.


ಇದಲ್ಲದೆ ಯೆಹೋವದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದನು.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.


ಅವು ಭೂವಿುಯನ್ನೆಲ್ಲಾ ಮುಚ್ಚಿಕೊಂಡದ್ದರಿಂದ ನೆಲವು ಕಾಣದೆಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ ಅಡವಿಯ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.


ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು.


ಕರ್ತನಾದ ಯೆಹೋವನು ಇನ್ನೊಂದನ್ನು ನನಗೆ ತೋರಿಸಿದನು - ಆಹಾ, ಕರ್ತನಾದ ಯೆಹೋವನು ತನ್ನ ಪಕ್ಷವಾಗಿ ವ್ಯಾಜ್ಯವಾಡುವದಕ್ಕೆ ಅಗ್ನಿಯನ್ನು ಕರೆದನು.


ಇವರು ನಿನ್ನ ಬೆಳೆಯನ್ನೂ ನಿನ್ನ ಆಹಾರವನ್ನೂ ನಿನ್ನ ಗಂಡು ಹೆಣ್ಣುಮಕ್ಕಳನ್ನೂ ನಿನ್ನ ದನಕುರಿಗಳನ್ನೂ ನಿನ್ನ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು; ನಿನ್ನ ಭರವಸದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.


ಬೆಂಕಿಯು ಆತನ ಮುಂಗಡೆಯಿಂದ ಹೋಗಿ ಸುತ್ತಲೂ ಆತನ ವೈರಿಗಳನ್ನು ದಹಿಸಿ ಬಿಡುತ್ತದೆ.


ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ಪಟ್ಟಣಗಳನ್ನು ಕೆಡವಿ ಲೋಕವನ್ನು ಕಾಡನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ? ಅಂದುಕೊಳ್ಳುವರು.


ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸುರೂ ಇಲ್ಲ.


ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.


ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;


ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು