Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:30 - ಕನ್ನಡ ಸತ್ಯವೇದವು J.V. (BSI)

30 ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:30
16 ತಿಳಿವುಗಳ ಹೋಲಿಕೆ  

ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಉತ್ಪಾತಗಳೂ ಆಕಾಶದಲ್ಲಿ ಮಹಾ ಸೂಚನೆಗಳೂ ತೋರುವವು.


ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಆದರೆ ಪಟ್ಟಣದಿಂದ ಹೊಗೆಯೆದ್ದು ಸ್ತಂಭದೋಪಾದಿಯಲ್ಲಿ ಕಾಣಿಸಲು ಇಸ್ರಾಯೇಲ್ಯರು ತಿರುಗಿ ನಿಂತರು.


ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾಗಿ ಬದುಕಿದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡುವಾಗ ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ಎದೆ ಬಡುಕೊಳ್ಳುತ್ತಾ -


ಸೊದೋಮ್ ಗೊಮೋರಗಳ ಕಡೆಗೂ ಆ ಎಲ್ಲಾ ಸೀಮೆಯ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಏರಿತು.


ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾ - ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವದು ಎಂದು ಕೂಗಿ ಹೇಳಿದರು.


ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು?


ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ ಓಡಿಹೋಗುತ್ತಿದ್ದವರು ತಿರುಗಿಕೊಂಡು ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚಿನೋಡುವವರೂ ಉಳಿದ ಇಸ್ರಾಯೇಲ್ಯರೂ ತಮ್ಮ ತಮ್ಮೊಳಗೆ ಗೊತ್ತು ಮಾಡಿದ್ದರು.


ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶಕ್ಕೆ ಏರಿಹೋಗುವದನ್ನು ಕಂಡು ಯಾವ ಮಾರ್ಗದಿಂದಲಾದರೂ ತಪ್ಪಿಸಿಕೊಳ್ಳಲಾರದವರಾದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.


ಮೊದಲನೆಯ ದೇವದೂತನು ತುತೂರಿಯನ್ನೂದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂವಿುಗೆ ಸುರಿಸಲ್ಪಟ್ಟವು; ಭೂವಿುಯೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಉಡುಗಿಹೋಗುವವು, ಇಂಥಾ ದಿನವು ಒಂದೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು