Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:7 - ಕನ್ನಡ ಸತ್ಯವೇದವು J.V. (BSI)

7 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆಯೇರುತ್ತವೆ; ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ, ಆ ಸಾಲುಗಳನ್ನು ಕಲಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವು ಶೂರರಂತೆ ಹೋರಾಡುತ್ತವೆ, ಯೋಧರಂತೆ ಗೋಡೆಗಳನ್ನೇರುತ್ತವೆ, ಸಾಲುಸಾಲಾಗಿ ನಡೆದು, ಕ್ರಮತಪ್ಪದೆ ಸಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಸೈನಿಕರು ವೇಗವಾಗಿ ಓಡುವರು; ಗೋಡೆ ಹತ್ತುವರು, ನೇರವಾಗಿ ಮುಂದೆ ಹೋಗುವರು. ದಾರಿಯಿಂದ ಅತ್ತಿತ್ತ ಹೋಗರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:7
11 ತಿಳಿವುಗಳ ಹೋಲಿಕೆ  

ವಿುಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಲ್ಲಿ ಕಳ್ಳರಂತೆ ನುಗ್ಗುತ್ತವೆ.


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಆ ದಿವಸ ದಾವೀದನು - ಯೆಬೂಸಿಯರನ್ನು ಜಯಿಸಬೇಕೆಂದಿರುವವನು ಜಲದ್ವಾರದಲ್ಲಿ ಹತ್ತಿಹೋಗಿ ದಾವೀದನಿಗೆ ಅಸಹ್ಯರಾಗಿರುವ ಕುರುಡರನ್ನೂ ಕುಂಟರನ್ನೂ ಕಂದಕದಲ್ಲಿ ನಾಶಮಾಡಿಬಿಡಲಿ ಎಂದು ಹೇಳಿದನು. ಆದದರಿಂದ ಕುರುಡರೂ ಕುಂಟರೂ ಇದ್ದಾರೆ, ಒಳಗೆ ಹೋಗಲಾಗದು ಎಂದು ಗಾದೆಯುಂಟು.


ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು; ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು; ಸಿಂಹಗಳಿಗಿಂತಲೂ ಬಲವುಳ್ಳವರು.


ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟು ಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವದಕ್ಕೆ ಉಲ್ಲಾಸಗೊಂಡಿದ್ದಾನೆ.


ನನ್ನನ್ನು ಒಡೆದೊಡೆದು ಶಿಥಿಲಪಡಿಸಿ ಶೂರನ ಹಾಗೆ ನನ್ನ ಮೇಲೆ ಓಡಿಬರುತ್ತಾನೆ.


ಒಂದಕ್ಕೊಂದು ನೂಕಾಡುವದಿಲ್ಲ, ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ, ಸಾಲುಗಳು ಒಡೆದುಹೋಗುವದಿಲ್ಲ.


ಆಶೇರ್ಯರಿಂದ ಕಾಳಗಕ್ಕೆ ಸಿದ್ಧರಾದ ನಾಲ್ವತ್ತು ಸಾವಿರ ಮಂದಿ ಯುದ್ಧನಿಪುಣರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು