Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:19 - ಕನ್ನಡ ಸತ್ಯವೇದವು J.V. (BSI)

19 ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:19
19 ತಿಳಿವುಗಳ ಹೋಲಿಕೆ  

ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲಿಗೆ ತಟ್ಟಲಿ ಎಂದು ಚೀಯೋನಿನವರು ಅನ್ನುತ್ತಾರೆ; ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ ಎಂದು ಯೆರೂಸಲೇವಿುನವರು ಹೇಳುತ್ತಾರೆ.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದುಲೆಬನೋನುಗಳ ಪ್ರಾಂತಕ್ಕೆ ಬರಮಾಡುವೆನು; ಅವರಿಗೆ ಸಾಕಾದಷ್ಟು ಸ್ಥಳ ಸಿಕ್ಕದು.


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋವಿುನ ವಿಷಯವಾಗಿ ನುಡಿದ ವಾಕ್ಯ. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ; ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿಕಳುಹಿಸಿದ್ದಾನೆ - ಹೊರಡಿರಿ, ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳೋಣ.


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.


ಎದೋಮು ಬೆರಗಿಗೆ ಆಸ್ಪದವಾಗುವದು; ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶನಮಾಡುವನು; ಯೂಫ್ರೇಟೀಸ್ ನದಿಯ ಮೇಲೆ ಕೈ ಝಾಡಿಸಿ ತನ್ನ ಬಿಸಿಗಾಳಿಯಿಂದ ಅದನ್ನು ಏಳು ತೊರೆಗಳನ್ನಾಗಿ ಒಡೆದು ಜನರು ಕೆರ ಮೆಟ್ಟಿ ದಾಟುವಂತೆ ಮಾಡುವನು.


ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.


ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.


ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು