Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:6 - ಕನ್ನಡ ಸತ್ಯವೇದವು J.V. (BSI)

6 ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಅವರ ಗಡಿಯಿಂದ ದೂರ ಮಾಡಬೇಕೆಂದು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜುದೇಯ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ; ಅವರನ್ನು ತಾಯ್ನಾಡಿನಿಂದ ದೂರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:6
6 ತಿಳಿವುಗಳ ಹೋಲಿಕೆ  

ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.


ಹೌದು, ನನ್ನ ಜನರಿಗಾಗಿ ಚೀಟುಹಾಕಿವೆ, ಸೂಳೆಗಾಗಿ ಹುಡುಗನನ್ನು ಬದಲು ಮಾಡಿವೆ, ದ್ರಾಕ್ಷಾರಸಕ್ಕೆ ಹುಡುಗಿಯನ್ನು ಬದಲು ಕೊಟ್ಟು ಪಾನಮಾಡಿವೆ.


ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಯೆಹೂದ್ಯರಿಗೆ ಮಾರುವೆನು; ಅವರು ಅವರನ್ನು ದೂರದ ಜನಾಂಗವಾದ ಶೆಬದವರಿಗೆ ಮಾರಿಬಿಡುವರು; ಯೆಹೋವನೇ ಇದನ್ನು ನುಡಿದಿದ್ದಾನೆ.


ನೀವು ಐಗುಪ್ತದೇಶವನ್ನು ತಿರಿಗಿ ಎಂದಿಗೂ ನೋಡುವದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರಿಗಿ ಹೋಗಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವದಿಲ್ಲ.


ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವದಿಲ್ಲ.


ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ, ಅದರಲ್ಲಿ ಎಫ್ರಾಯೀಮನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು