Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:15 - ಕನ್ನಡ ಸತ್ಯವೇದವು J.V. (BSI)

15 ಯೋಹಾನನು ಆತನ ವಿಷಯವಾಗಿ ಸಾಕ್ಷಿಕೊಡುತ್ತಾನೆ; ಹೇಗಂದರೆ - ನನ್ನ ಹಿಂದೆ ಬರುವವನು ನನಗಿಂತ ಮೊದಲೇ ಇದ್ದದರಿಂದ ನನಗೆ ಮುಂದಿನವನಾದನು ಎಂಬದಾಗಿ ನಾನು ಹೇಳಿದವನು ಈತನೇ ಎಂದು ಕೂಗಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, “ ‘ಅವರು ನನ್ನ ಬಳಿಗೆ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,” ಎಂದು ಘೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜುವಾಂವಾನ್ ತೆಚ್ಯಾ ವಿಶಯಾತ್ ಸಾಕ್ಷಿ ದಿವ್ನ್, ಬೊಬ್ ಮಾರುನ್ ಸಾಂಗಟ್ಲ್ಯಾನ್" ಮಿಯಾ ಕೊನಾಚ್ಯಾ ವಿಶಯಾತ್ ಸಾಂಗಟ್ಲಾ ಕಿ ತೊಚ್ ತೊ. ತೊ ಮಾಜ್ಯಾ ಮಾನಾ ಯೆತಾ, ಖರೆ ತೊ ಮಾಜ್ಯಾನ್ಕಿ ಮೊಟೊ, ಕಶ್ಯಾಕ್ ಮಟ್ಲ್ಯಾರ್, ತೊ ಮಿಯಾ ಉಪ್ಜುಚ್ಯಾಕಿ ಅದ್ದಿಚ್ಯಾನುಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:15
21 ತಿಳಿವುಗಳ ಹೋಲಿಕೆ  

ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಆತನು ಎಲ್ಲಕ್ಕೂ ಮೊದಲು ಇದ್ದವನು; ಆತನು ಸಮಸ್ತಕ್ಕೂ ಆಧಾರ ಭೂತನು.


ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ಯೋಹಾನನು ಅವರೆಲ್ಲರಿಗೆ - ನಾನಂತೂ ನಿಮಗೆ ನೀರಿನ ಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮದಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.


ಆತನೇ ನನ್ನ ಹಿಂದೆ ಬರತಕ್ಕವನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ ಅಂದನು.


ಅವನು - ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಬಾರನ್ನು ಬೊಗ್ಗಿಕೊಂಡು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನ ಕಾರ್ಯಗಳಲ್ಲಿ ನಾನೇ ಪ್ರಥಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು