ಯೋಹಾನ 1:21 - ಕನ್ನಡ ಸತ್ಯವೇದವು J.V. (BSI)21 ಹಾಗಾದರೆ ನೀನು ಯಾರು? ಎಲೀಯನೋ? ಎಂದು ಅವರು ಕೇಳಲು ಅಲ್ಲವೆಂದನು. ನೀನು ಬರಬೇಕಾದ ಆ ಪ್ರವಾದಿಯೋ? ಅಂದದ್ದಕ್ಕೂ ಅಲ್ಲವೆಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಾಗಾದರೆ, “ನೀನು ಎಲೀಯನೋ?’ ಎಂದು ಕೇಳಲು ‘ಅಲ್ಲ’ ಎಂದನು. “ನೀನು ಬರಬೇಕಾಗಿದ್ದ ಪ್ರವಾದಿಯಿರಬಹುದೇ?’ ಎಂದು ಅವರು ಮತ್ತೆ ಕೇಳಲು, “ಅದೂ ಅಲ್ಲ” ಎಂದು ಮರುನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತನ್ನಾ ತೆನಿ,ತಿಯಾ ಕೊನ್ ತರ್? ಎಲಿಯಾ ಕಾಯ್? ಮನುನ್ ಇಚಾರ್‍ಲ್ಯಾನಿ. ತನ್ನಾ ಜುವಾಂವಾನ್, ನಾ, ಮಿಯಾ ನ್ಹಯ್, ಮನುನ್ ಜಬಾಬ್ ದಿಲ್ಯಾನ್. ತನ್ನಾ,“ತಿಯಾ ಪ್ರವಾದಿ ಕಾಯ್?” ಮನುನ್ ತೆನಿ ಇಚಾರ್‍ಲ್ಯಾನಿ. ತನ್ನಾ ತೆನಿ, “ಮಿಯಾ ಪ್ರವಾದಿಬಿ ನ್ಹಯ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |