Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:29 - ಕನ್ನಡ ಸತ್ಯವೇದವು J.V. (BSI)

29 ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ದುಸ್ರ್ಯಾ ದಿಸಿ ಅಪ್ನಾಕ್ಡೆ ಯೆತಲ್ಯಾ ಜೆಜುಕ್ ಬಗುನ್ ಜುವಾಂವಾನ್, “ಬಗಾ ಹೆ ದೆವಾಚೆ ಬೊಕ್ಡು ಜಗಾಚೆ ಪಾಪ್ ಕಾಡುನ್ ಟಾಕ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:29
65 ತಿಳಿವುಗಳ ಹೋಲಿಕೆ  

ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.


ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಯಜ್ಞದ ಕುರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು. ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು - ಬಾ ಎಂದು ಗುಡುಗಿನಂತಿದ್ದ ಸ್ವರದಿಂದ ಹೇಳುವದನ್ನು ಕೇಳಿದನು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಅಗೋ ಯಜ್ಞಕ್ಕೆ ದೇವರು ನೇವಿುಸಿದ ಕುರಿ ಅಂದನು.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಅವನು ಓದುತ್ತಿದ್ದ ಶಾಸ್ತ್ರವಚನವು ಯಾವದಂದರೆ - ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯಲೇ ಇಲ್ಲ.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಯಜ್ಞದ ಕುರಿಯಾದಾತನ ವಿವಾಹ ಕಾಲವು ಬಂತು; ಆತನಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ; ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ ಎಂದು ಹೇಳಿತು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡುತ್ತಾ - ಬಾ, ಯಜ್ಞದ ಕುರಿಯಾದಾತನಿಗೆ ಹೆಂಡತಿಯಾಗತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿ


ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.


ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.


ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಹೊಂದಲಾಗದ ಎಲ್ಲಾ ಪಾಪಗಳಿಂದ ನಂಬುವವರೆಲ್ಲರು ಆತನ ಮೂಲಕವಾಗಿ ಬಿಡುಗಡೆ ಹೊಂದಿ ನೀತಿವಂತರೆನಿಸಿಕೊಳ್ಳುತ್ತಾರೆ.


ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಯಜ್ಞದ ಕುರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ; ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ಇಸ್ರಾಯೇಲ್ಯರು ಕಾಣಿಕೆಯಗಿ ಸಮರ್ಪಿಸುವ ದೇವರ ಎಲ್ಲಾ ವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷವನ್ನು ವಹಿಸಿಕೊಂಡದರಿಂದ ಅವರು ಯೆಹೋವನ ಸನ್ನಿಧಿಯಲ್ಲಿ ಅಂಗೀಕರಿಸಲ್ಪಡುವರು.


ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.


ಆಗ ಯೆಹೋವನು ಆರೋನನಿಗೆ - ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಮರುದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದಾಗ ಯೋಹಾನನು ಅಲ್ಲಿ ತಿರುಗಾಡುತ್ತಿರುವ ಯೇಸುವನ್ನು ನೋಡಿ -


ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.


ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಊರಿನಲ್ಲಿ ಒಂದು ಮದುವೆ ಆಯಿತು; ಯೇಸುವಿನ ತಾಯಿ ಅಲ್ಲಿ ಇದ್ದಳು;


ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.


ಪರಲೋಕದಿಂದ ಇಳಿದುಬರುವ ಜೀವವುಳ್ಳ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾಕಾಲ ಬದುಕುವನು. ಮತ್ತು ನಾನು ಕೊಡುವ ರೊಟ್ಟಿ ನನ್ನ ಮಾಂಸವೇ; ಅದನ್ನು ಲೋಕದ ಜೀವಕ್ಕೋಸ್ಕರ ಕೊಡುವೆನು ಎಂದು ಹೇಳಿದನು.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ಆದಕಾರಣ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು