ಯೋಹಾನ 1:33 - ಕನ್ನಡ ಸತ್ಯವೇದವು J.V. (BSI)33 ನನಗೂ ಆತನ ಗುರುತಿರಲಿಲ್ಲ; ಆದರೆ ನೀರಿನ ಸ್ನಾನವನ್ನು ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನು - ಯಾವನ ಮೇಲೆ ಆತ್ಮವು ಇಳಿದುಬಂದು ಇರುವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮದ ಸ್ನಾನವನ್ನು ಕೊಡುವವನು ಎಂದು ತಾನೇ ನನಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜಾಲ್ಯಾರ್‍ಬಿ ತೊ ಕೊನ್ ಮನುನ್ ಮಾಕಾ ಗೊತ್ತ್ ನತ್ತೆ. ಖರೆ ಮಾಕಾ ಪಾನಿಯಾನ್ ಬಾಲ್ತಿಮ್ ದಿವ್ಕ್ ಮನುನ್ ಧಾಡುನ್ ದಿಲ್ಲ್ಯಾ ದೆವಾನ್, ಕೊನಾಚ್ಯಾ ವರ್ತಿ ದೆವಾಚೊ ಆತ್ಮೊ ಉತರ್‍ತಲೊ ತುಕಾ ದಿಸ್ತಾ, ತೊಚ್ ಪವಿತ್ರ್ ಆತ್ಮ್ಯಾನ್ ಬಾಲ್ತಿಮ್ ದಿತಲೊ ಮನುನ್ ಮಾಕಾ ಸಾಂಗಟಲ್ಲ್ಯಾನ್. ಅಧ್ಯಾಯವನ್ನು ನೋಡಿ |