ಯೋಹಾನ 1:38 - ಕನ್ನಡ ಸತ್ಯವೇದವು J.V. (BSI)38 ಯೇಸು ಹಿಂತಿರುಗಿ ಅವರು ತನ್ನ ಹಿಂದೆ ಬರುವದನ್ನು ಕಂಡು - ನಿಮಗೆ ಏನು ಬೇಕಾಗಿದೆ ಎಂದು ಕೇಳಲು ಅವರು - ರಬ್ಬಿಯೇ, ನೀನು ಇಳುಕೊಂಡಿರುವದು ಎಲ್ಲಿ? ಅಂದರು. (ರಬ್ಬಿ ಅಂದರೆ ಗುರು). ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಆ ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಜೆಜು ಫಾಟಿ ಪರ್ತುನ್ ಬಗುನ್ ಅನಿ ತೆನಿ ಅಪ್ನಾಚ್ಯಾ ಫಾಟ್ನಾ ಯೆತಲೆ ಬಗುನ್ “ತುಮ್ಕಾ ಕಾಯ್ ಪಾಜೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ರಾಬ್ಬಿ ತಿಯಾ ಖೈ ರ್‍ಹಾತೆಯ್?” ರಾಬ್ಬಿ ಮಟ್ಲ್ಯಾರ್ ಗುರುಜಿ. ಅಧ್ಯಾಯವನ್ನು ನೋಡಿ |