Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:43 - ಕನ್ನಡ ಸತ್ಯವೇದವು J.V. (BSI)

43 ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ದುಸ್ರೆಂದಿಸಿ ಜೆಜುನ್ ಗಾಲಿಲಿಯಾಕ್ ಜಾವ್ಚೆ ಮನುನ್ ನಿರ್‍ದಾರ್ ಕರ್ಲ್ಯಾನ್, ತನ್ನಾ ತೆಕಾ ಫಿಲಿಪ್ ಗಾವ್ಲೊ. ತೆಕಾ ಜೆಜುನ್ “ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:43
19 ತಿಳಿವುಗಳ ಹೋಲಿಕೆ  

ಫಿಲಿಪ್ಪನು - ಸ್ವಾಮೀ, ನಮಗೆ ತಂದೆಯನ್ನು ತೋರಿಸು, ನಮಗೆ ಅಷ್ಟೇ ಸಾಕು ಅಂದನು.


ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ - ಇಗೋ, ನಾನಿದ್ದೇನೆ ನಾನಿದ್ದೇನೆ ಎನ್ನುತ್ತಿದ್ದೆನು.


ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು - ಅಯ್ಯಾ, ಯೇಸುವನ್ನು ನೋಡಬೇಕೆಂದಿದ್ದೇವೆಂದು ಅವನನ್ನು ಬೇಡಿಕೊಂಡರು.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ.


ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಬಹು ಜನರ ಗುಂಪು ತನ್ನ ಬಳಿಗೆ ಬರುವದನ್ನು ಕಂಡು - ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡುತರೋಣ? ಎಂದು ಫಿಲಿಪ್ಪನನ್ನು ಕೇಳಿದನು.


ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ.


ಇದೆಲ್ಲಾ ಯೊರ್ದನ್ ಹೊಳೆಯ ಆಚೇಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು. ಅಲ್ಲಿ ಯೋಹಾನನು ಸ್ನಾನ ಕೊಡುತ್ತಿದ್ದನು.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕದ ಮತ್ತಾಯ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ,


ಅದಕ್ಕೆ ಫಿಲಿಪ್ಪನು - ಒಬ್ಬೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೆ ಇನ್ನೂರು ಹಣದ ರೊಟ್ಟಿಯಾದರೂ ಸಾಲದು ಅಂದನು.


ಮರುದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದಾಗ ಯೋಹಾನನು ಅಲ್ಲಿ ತಿರುಗಾಡುತ್ತಿರುವ ಯೇಸುವನ್ನು ನೋಡಿ -


ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.


ಯೇಸು ಅವನಿಗೆ - ನನ್ನ ಹಿಂದೆ ಬಾ, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಈ ಫಿಲಿಪ್ಪನು ಬೇತ್ಸಾಯಿದದವನು, ಅಂದರೆ ಅಂದ್ರೆಯ ಪೇತ್ರರ ಊರಿನವನು.


ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಆ ಇಬ್ಬರು ಶಿಷ್ಯರು ಅದನ್ನು ಕೇಳಿ ಯೇಸುವಿನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು