Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:45 - ಕನ್ನಡ ಸತ್ಯವೇದವು J.V. (BSI)

45 ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಫಿಲಿಪಾಕ್ ನಾಥಾನಾಯೆಲ್ ಗಾವ್ಲೊ, ತನ್ನಾ ಫಿಲಿಪಾನ್ ತೆಕಾ, “ಮೊಯ್ಜೆನ್ ಅಪ್ನಾಚ್ಯಾ ಖಾಯ್ದ್ಯಾತ್ನಿ ಅನಿ ಪ್ರವಾದ್ಯಾನಿ ಅಪ್ನಾಚ್ಯಾ ಪುಸ್ತಕಾತ್ನಿ ಕೊನಾಚ್ಯಾ ವಿಶಯಾತ್ ಲಿವಲ್ಲ್ಯಾನಾತ್ ತೊ ಅಮ್ಕಾ ಗಾವ್ಲೊ. ತೊ ನಜರೆತಾತ್ಲೊ ಜೆಜು ಜುಜೆಚೊ ಲೆಕ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:45
41 ತಿಳಿವುಗಳ ಹೋಲಿಕೆ  

ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು;


ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ಆತನು - ಯಾರನ್ನು ಹುಡುಕುತ್ತೀರೆಂದು ತಿರಿಗಿ ಅವರನ್ನು ಕೇಳಲು ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅಂದರು.


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಇವನು ಆ ಬಡಗಿಯಲ್ಲವೇ. ಇವನು ಮರಿಯಳ ಮಗನಲ್ಲವೇ. ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ. ಇವನ ತಂಗಿಯರು ಇಲ್ಲಿ ನಮ್ಮಲ್ಲಿ ಇದ್ದಾರಲ್ಲವೇ ಎಂದು ಮಾತಾಡಿಕೊಂಡು ಆತನ ವಿಷಯವಾಗಿ ಬೇಸರಗೊಂಡರು.


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಅದಕ್ಕೆ ನಾನು - ಕರ್ತನೇ, ನೀನಾರು? ಎಂದು ಕೇಳಲು ಆತನು - ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ತನ್ನನ್ನು ತೋರಿಸಿಕೊಂಡ ರೀತಿ ಯಾವದಂದರೆ - ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಕುಮಾರರೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿದ್ದರು.


ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು.


ಅವನು ಚಳಿಕಾಯಿಸಿಕೊಳ್ಳುತ್ತಿರುವದನ್ನು ಕಂಡು ಅವನನ್ನು ನೋಡಿ - ನೀನು ಸಹ ಆ ನಜರೇತಿನವನಾದ ಯೇಸುವಿನ ಕೂಡ ಇದ್ದವನು ಅಂದಳು.


ಇವನು ಆ ಬಡಗಿಯ ಮಗನಲ್ಲವೇ. ಇವನ ತಾಯಿ ಮರಿಯಳೆಂಬವಳಲ್ಲವೇ. ಯಾಕೋಬ ಯೋಸೇಫ ಸೀಮೋನ ಯೂದ ಇವರು ಇವನ ತಮ್ಮಂದಿರಲ್ಲವೇ.


ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ.


ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು.


ಇವನ ತಂದೆತಾಯಿಗಳನ್ನು ನಾವು ಬಲ್ಲೆವಲ್ಲವೇ. ಈಗ ಇವನು ಪರಲೋಕದಿಂದ ಇಳಿದುಬಂದಿದ್ದೇನೆಂದು ಹೇಳುವದು ಹೇಗೆ? ಅಂದರು.


ಯೇಸು ಉಪದೇಶಮಾಡುವದಕ್ಕೆ ಪ್ರಾರಂಭಿಸಿದಾಗ ಹೆಚ್ಚುಕಡಿಮೆ ಮೂವತ್ತು ವರುಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು.


ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕದ ಮತ್ತಾಯ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ,


ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು - ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ ಎಂದು ಹೇಳಲು


ಈ ಫಿಲಿಪ್ಪನು ಬೇತ್ಸಾಯಿದದವನು, ಅಂದರೆ ಅಂದ್ರೆಯ ಪೇತ್ರರ ಊರಿನವನು.


ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಬಹು ಜನರ ಗುಂಪು ತನ್ನ ಬಳಿಗೆ ಬರುವದನ್ನು ಕಂಡು - ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡುತರೋಣ? ಎಂದು ಫಿಲಿಪ್ಪನನ್ನು ಕೇಳಿದನು.


ಅದಕ್ಕೆ ಫಿಲಿಪ್ಪನು - ಒಬ್ಬೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೆ ಇನ್ನೂರು ಹಣದ ರೊಟ್ಟಿಯಾದರೂ ಸಾಲದು ಅಂದನು.


ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು - ಅಯ್ಯಾ, ಯೇಸುವನ್ನು ನೋಡಬೇಕೆಂದಿದ್ದೇವೆಂದು ಅವನನ್ನು ಬೇಡಿಕೊಂಡರು.


ಫಿಲಿಪ್ಪನು - ಸ್ವಾಮೀ, ನಮಗೆ ತಂದೆಯನ್ನು ತೋರಿಸು, ನಮಗೆ ಅಷ್ಟೇ ಸಾಕು ಅಂದನು.


ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು