Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:47 - ಕನ್ನಡ ಸತ್ಯವೇದವು J.V. (BSI)

47 ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಯೇಸು ತನ್ನ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡು ಅವನ ಬಗ್ಗೆ, “ಇವನು ನಿಜವಾದ ಇಸ್ರೇಲ. ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಅಪ್ನಾಕ್ಡೆ ಯೆತಲ್ಯಾ ನಾಥಾನಾಯೆಲಾಕ್ ಬಗುನ್ ಜೆಜುನ್, “ಹ್ಯೊ ಎಕ್ ಖರೊ ಇಸ್ರಾಯೆಲ್‍ಕಾರ್, ತ್ಯೆಚ್ಯಾ ಭುತ್ತುರ್ ಕಸ್ಲಿಬಿ ಚುಕ್ ನಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:47
13 ತಿಳಿವುಗಳ ಹೋಲಿಕೆ  

ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ; ಇವರು ನಿರ್ದೋಷಿಗಳಾಗಿದ್ದಾರೆ.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು.


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ;


ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ.


ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಯೇಸು ಅವಳಿಗೆ - ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು