Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:9 - ಕನ್ನಡ ಸತ್ಯವೇದವು J.V. (BSI)

9 ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜಗಾತ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವರ್ತಿ ಫಾಕ್ತಲೊ ಖರೊ ಉಜ್ವೊಡ್ ಹ್ಯೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:9
15 ತಿಳಿವುಗಳ ಹೋಲಿಕೆ  

ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಆದರೂ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಹೇಗಂದರೆ ಕತ್ತಲೆಯು ಕಳೆದುಹೋಗುತ್ತದೆ, ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ; ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಮತ್ತು ಸತ್ಯವೆಂಬದು ನಮ್ಮಲ್ಲಿಲ್ಲ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ನಾನೇ ನಿಜವಾದ ದ್ರಾಕ್ಷೇಬಳ್ಳಿ. ನನ್ನ ತಂದೆ ತೋಟಗಾರನು.


ಮತ್ತು ಜನರ ಗುಂಪುಗಳಲ್ಲಿ ಆತನ ವಿಷಯವಾಗಿ ಬಹಳ ಗುಜುಗುಜು ಮಾತು ನಡೆಯುತ್ತಿತ್ತು. ಕೆಲವರು - ಆತನು ಒಳ್ಳೆಯವನು ಅಂದರು; ಇನ್ನು ಕೆಲವರು - ಅಲ್ಲ, ಜನರನ್ನು ತಪ್ಪಾದ ಮಾರ್ಗಕ್ಕೆ ಎಳೆಯುತ್ತಾನೆ ಅಂದರು.


ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು!


ಒಂದು ಭಾಗದಲ್ಲಿಯೂ ಕತ್ತಲಿಲ್ಲದ್ದಾಗಿದ್ದರೆ ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಕಾಲದಲ್ಲಿ ಹೇಗೋ ಹಾಗೆಯೇ ಅದು ಪೂರ್ಣವಾಗಿ ಬೆಳಕಾಗಿರುವದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು