ಯೋಹಾನ 10:14 - ಕನ್ನಡ ಸತ್ಯವೇದವು J.V. (BSI)14-15 ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-15 ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14-15 “ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಮಿಯಾ ಬರೊ ಕುರ್‍ಬುರ್, ಕಶೆ ಬಾಬಾ ಮಾಕಾ ವಳಕ್ತಾ ಅನಿ ಮಿಯಾ ಬಾಬಾಕ್ ವಳಕ್ತಾ, ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.