Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:32 - ಕನ್ನಡ ಸತ್ಯವೇದವು J.V. (BSI)

32 ಯೇಸು ಅವರನ್ನು - ತಂದೆಯ ಕಡೆಯಿಂದ ಅನೇಕ ಒಳ್ಳೇ ಕ್ರಿಯೆಗಳನ್ನು ನಿಮಗೆ ತೋರಿಸಿದೆನು; ಅವುಗಳಲ್ಲಿ ಯಾವ ಕ್ರಿಯೆಯ ದೆಸೆಯಿಂದ ನನ್ನ ಮೇಲೆ ಕಲ್ಲೆಸೆಯುತ್ತೀರಿ ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜೆಜುನ್ ತೆಂಕಾ,“ಮಾಜ್ಯಾ ಬಾಬಾನ್ ಕರುಕ್ ಮನುನ್ ಮಾಕಾ ದಿಲ್ಲಿ ಲೈ ಬರಿ ಕಾಮಾ ಮಿಯಾ ತುಮ್ಚ್ಯಾ ಮದ್ದಿ ಕರ್‍ಲೊ; ಹ್ಯಾ ಕಾಮಾನಿತ್ಲ್ಯಾ ಖಲ್ಯಾ ಕಾಮಾಸಾಟ್ನಿ ತುಮಿ ಮಾಕಾ ಗುಂಡ್ಯಾನಿ ಮಾರ್‍ತ್ಯಾಶಿ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:32
16 ತಿಳಿವುಗಳ ಹೋಲಿಕೆ  

ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನ ಮಾತನ್ನು ನಂಬಬೇಡಿರಿ;


ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.


ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಅದಕ್ಕೆ ಯೇಸು - ನಿಮಗೆ ಹೇಳಿದೆನು, ಆದರೆ ನೀವು ನಂಬದೆ ಇದ್ದೀರಿ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನಗೆ ಸಾಕ್ಷಿಯಾಗಿವೆ.


ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ - ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ ನಿನ್ನ ಸೇವಕರಿಗಾಗಲಿ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?


ಯೆಹೂದ್ಯರು ಆತನನ್ನು ಹೊಡೆದು ಕೊಲ್ಲಬೇಕೆಂದು ತಿರಿಗಿ ಕಲ್ಲುಗಳನ್ನು ತೆಗೆದುಕೊಂಡು ಬರಲು


ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು