ಯೋಹಾನ 10:33 - ಕನ್ನಡ ಸತ್ಯವೇದವು J.V. (BSI)33 ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತ್ಯಾ ಲೊಕಾನಿ ತೆಕಾ, “ಅಮಿ ತಿಯಾ ಕರಲ್ಲ್ಯಾ ಖಲ್ಯಾಬಿ ಬರ್‍ಯಾ ಕಾಮಾಸಾಟ್ನಿ ತುಕಾ ಗುಂಡ್ಯಾನಿ ಮಾರುಕ್ ಉಟುಕ್ನಾವ್! ತಿಯಾ ಕರ್‍ತಲ್ಯಾ ನಿಂದ್ಯಾಸಾಟ್ನಿ ಅಮಿ ಮಾರುಕ್ ಉಟ್ಲಾವ್! ತಿಯಾ ಎಕ್ ಮಾನುಸ್, ಖರೆ ತಿಯಾ ತುಕಾಚ್ ದೆವ್ ಕರುಕ್ ಬಗುಲಾಲೆಯ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |