Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:9 - ಕನ್ನಡ ಸತ್ಯವೇದವು J.V. (BSI)

9 ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾಚ್ ದಡ್ಪೊ, ಮಾಜ್ಯಾಕ್ನಾ ಜೆ ಕೊನ್ ಯೆತಾ ತೊ ಹುರ್ತಾ, ತೊ ಯೆತಾ ಅನಿ ಭಾಯ್ರ್ ಜಾತಾ ತೆಕಾ ಬರೊ ಚಾರೊ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:9
16 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ಆದಕಾರಣ ಯೇಸು ಮತ್ತೂ ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಲಾಗಿದ್ದೇನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರೀಹಟ್ಟಿಯೊಳಗೆ ಬಾಗಲಿಂದ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನು ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.


ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು -


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇವಿುಗೆ ಬಂದು ಸೇರುವ ಹಿಂಡಿನ ಹಾಗೆ ಮನುಷ್ಯರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ಬಾಗಲು ಕಾಯುವವನು ಅವನಿಗೆ ಬಾಗಲನ್ನು ತೆರೆಯುತ್ತಾನೆ, ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು