Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:10 - ಕನ್ನಡ ಸತ್ಯವೇದವು J.V. (BSI)

10 ರಾತ್ರಿಯಲ್ಲಿ ತಿರುಗಾಡಿದರೆ ಅವನಿಗೆ ಬೆಳಕಿಲ್ಲದ್ದರಿಂದ ಎಡವುವನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ರಾತ್ರಿಯಲ್ಲಿ ನಡೆಯುವವನು ಎಡವಿಬೀಳುತ್ತಾನೆ. ಕಾರಣ, ಅವನಲ್ಲಿ ಬೆಳಕು ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ರಾತ್ರಿಯಲ್ಲಿ ನಡೆಯುವವನು ಎಡವುತ್ತಾನೆ. ಏಕೆಂದರೆ ನೋಡಿಕೊಂಡು ನಡೆಯಲು ಅವನಿಗೆ ಯಾವ ಬೆಳಕೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯಾರಾದರೂ ರಾತ್ರಿಯಲ್ಲಿ ನಡೆದರೆ ತಮ್ಮಲ್ಲಿ ಬೆಳಕಿಲ್ಲದಿರುವುದರಿಂದ ಅವರು ಎಡವುತ್ತಾರೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಜೊ ಕೊನ್ ರಾಚ್ಚೆ ಚಲ್ತಾ ತೊ ಅದ್ಳುನ್ ಪಡ್ತಾ ಕಶ್ಯಾಕ್ ಮಟ್ಲ್ಯಾರ್ ತೆಕಾ ಉಜ್ವೊಡ್ ದಿಸಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:10
9 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವದು, ಮೂಢನು ಕತ್ತಲಲ್ಲಿ ನಡೆಯುವನು; ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡುಬಂತು.


ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು ತಾವೇ ನೆಲಕ್ಕೆ ಬಿದ್ದುಹೋದರು.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು.


ಯೇಸು - ಹಗಲಿಗೆ ಹನ್ನೆರಡು ತಾಸು ಉಂಟಲ್ಲವೇ. ಒಬ್ಬನು ಹಗಲಲ್ಲಿ ತಿರುಗಾಡಿದರೆ ಈ ಲೋಕದ ಬೆಳಕು ಕಾಣಿಸುವದರಿಂದ ಆತನು ಎಡವುವದಿಲ್ಲ;


ಈ ಮಾತುಗಳನ್ನು ಹೇಳಿದ ಮೇಲೆ ಅವರಿಗೆ - ನಮ್ಮ ವಿುತ್ರನಾದ ಲಾಜರನು ನಿದ್ರೆಮಾಡುತ್ತಾನೆ; ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು