Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:25 - ಕನ್ನಡ ಸತ್ಯವೇದವು J.V. (BSI)

25 ಯೇಸು ಆಕೆಗೆ - ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನನ್ನು ನಂಬುವವನು ಸತ್ತರೂ ಬದುಕುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಜೆಜುನ್ ತಿಕಾ “ಝಿತ್ತೆ ಹೊವ್ನ್ ಉಟ್ತಲೆ ಅನಿ ಜಿವ್ ಮಿಯಾಚ್. ಜೊ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾ ತೊ ಮರ್‍ಲ್ಯಾರ್‍ಬಿ ಝಿತ್ತೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:25
41 ತಿಳಿವುಗಳ ಹೋಲಿಕೆ  

ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.


ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಎಳೆದ ಹೊರತು ಯಾವನೂ ನನ್ನ ಬಳಿಗೆ ಬರಲಾರನು; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ಅವರಿಗೆ - ಜೀವಕೊಡುವ ರೊಟ್ಟಿ ನಾನೇ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ, ನನ್ನನ್ನು ನಂಬುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳುಕೊಂಡು ಆತನ ಮರಣದ ವಿಷಯದಲ್ಲಿ ಆತನಿಗೆ ಸರೂಪನಾಗಬೇಕೆಂಬದೇ ನನ್ನ ಕುತೂಹಲವಾಗಿದೆ.


ವಿುಕ್ಕ ಸತ್ತವರು ಆ ಸಾವಿರ ವರುಷ ತೀರುವ ತನಕ ಜೀವಿತರಾಗಿ ಏಳಲಿಲ್ಲ. ಇದೇ ಪ್ರಥಮ ಪುನರುತ್ಥಾನವು.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ತಂದೆಯು ತಾನು ಹೇಗೆ ಸ್ವತಃಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃಜೀವವುಳ್ಳವನಾಗಿರುವಂತೆ ಮಾಡಿದನು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ, ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕಿಸು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು.


ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.


ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವದೇ ಇಲ್ಲವೆಂಬದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.


ಇದು ಮಾತ್ರವಲ್ಲದೆ ಕ್ರಿಸ್ತನವರಾಗಿ ನಿದ್ರೆಹೋದವರು ನಾಶವಾದರು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು