Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:28 - ಕನ್ನಡ ಸತ್ಯವೇದವು J.V. (BSI)

28 ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು - ಗುರುವು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮಾರ್ಥಳು ಹೀಗೆ ಹೇಳಿದ ಮೇಲೆ, ತನ್ನ ಸಹೋದರಿಯಾದ ಮರಿಯಳ ಬಳಿಗೆ ಹಿಂತಿರುಗಿ ಹೋದಳು. ಮಾರ್ಥಳು ಮರಿಯಳೊಂದಿಗೆ ಪ್ರತ್ಯೇಕವಾಗಿ ಮಾತಾಡಿ, “ಗುರುವು (ಯೇಸು) ನಿನ್ನನ್ನು ಕರೆಯುತ್ತಿದ್ದಾನೆ” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, “ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾರ್ಥಾನ್ ಹೆ ಸಾಂಗುನ್ ಹೊಲ್ಲ್ಯಾ ಮಾನಾ ಅಪ್ನಾಚ್ಯಾ ಭೆನಿಕ್ಡೆ ಮರಿಕ್ಡೆ ಗೆಲಿ ಅನಿ ಕೊನಾಕ್ಬಿ ಗೊತ್ತ್ ನಸ್ತಾನಾ ಬಲ್ವುಲಿನ್ ಅನಿ ತೆನಿ ತಿಕಾ “ಗುರುಜಿ ಹಿತ್ತೆ ಯೆವ್ನ್ ಪಾವ್ಲಾ ಅನಿ ತೊ ತುಕಾ ಇಚಾರುಲಾಲಾ” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:28
19 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಗುರುವೆಂದೂ ಕರ್ತನೆಂದೂ ಕರೆಯುತ್ತೀರಿ; ನೀವು ಕರೆಯುವದು ಸರಿ; ನಾನು ಅಂಥವನೇ ಹೌದು.


ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವದಕ್ಕೆ ಹೋದಳು; ಆದರೆ ಮರಿಯಳು ಮನೆಯಲ್ಲೇ ಕೂತುಕೊಂಡಿದ್ದಳು.


ಆಗ ಯೇಸು ನಿಂತು - ಅವನನ್ನು ಕರೆಯಿರಿ ಅನ್ನಲು ಅವರು ಆ ಕುರುಡನನ್ನು ಕರೆದು - ಧೈರ್ಯವಿರಲಿ, ಏಳು, ನಿನ್ನನ್ನು ಕರೆಯುತ್ತಾನೆ ಅಂದರು.


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.


ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ).


ಬಾಗಲು ಕಾಯುವವನು ಅವನಿಗೆ ಬಾಗಲನ್ನು ತೆರೆಯುತ್ತಾನೆ, ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ.


ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡುಕೊಂಡು ಅವನಿಗೆ - ಮೆಸ್ಸೀಯನು ನಮಗೆ ಸಿಕ್ಕಿದನು ಎಂದು ಹೇಳಿ


ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ಭೋಜನ ಶಾಲೆ ಎಲ್ಲಿ ಎಂದು ನಿನ್ನನ್ನು ಕೇಳುತ್ತಾನೆ ಎಂಬದಾಗಿ ಹೇಳಿರಿ.


ಅವನು ಯಾವ ಮನೆಗೆ ಹೋಗುವನೋ ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ತನಗೆ ಭೋಜನಶಾಲೆ ಎಲ್ಲಿ ಎಂದು ಕೇಳುತ್ತಾನೆ ಎಂಬದಾಗಿ ಹೇಳಿರಿ.


ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ.


ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ;


ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.


ಮರಿಯಳು ಇದನ್ನು ಕೇಳುತ್ತಲೇ ತಟ್ಟನೆ ಎದ್ದು ಆತನ ಬಳಿಗೆ ಹೋದಳು.


ಯೇಸು ಇನ್ನೂ ಊರೊಳಗೆ ಬಾರದೆ ಮಾರ್ಥಳು ಆತನಿಗೆದುರಾಗಿ ಬಂದ ಸ್ಥಳದಲ್ಲೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು