Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:38 - ಕನ್ನಡ ಸತ್ಯವೇದವು J.V. (BSI)

38 ಯೇಸು ತನ್ನಲ್ಲಿ ತಿರಿಗಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲು ಆನಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಜೆಜು ಅನಿ ಎಗ್ದಾ ಲೈ ವಾಯ್ಟ್ ಕಳ್ವಳ್ಳೊ. ಅನಿ ಲಾಜರಾಕ್ ಥವಲ್ಲ್ಯಾ ಸಮಾದಿಕ್ಡೆ ಗೆಲೊ, ತ್ಯೆಚ್ಯಾ ವಾಟೆರ್ ಗುಂಡೊ ಲಾವ್ನ್ ಧಾಪಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:38
12 ತಿಳಿವುಗಳ ಹೋಲಿಕೆ  

ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ -


ಬಂಡೆಯಲ್ಲಿ ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೋದನು.


ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು.


ಸಮಾಧಿಗೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವದನ್ನು ಕಂಡು


ಇಲ್ಲಿ ನಿನಗೇನು? ಇಲ್ಲಿ ನಿನಗೆ ಯಾರಿದ್ದಾರೆ? ಇಲ್ಲಿ ನಿನಗಾಗಿ ಗೋರಿಯನ್ನು ತೋಡಿಸಿಕೊಂಡಿದ್ದೀಯಾ? ಎತ್ತರದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ ಬಂಡೆಯನ್ನು ಕಡೆಯಿಸಿ ನಿನಗೆ ನಿವಾಸವನ್ನು ಮಾಡಿಸುತ್ತಾ ಇದ್ದೀಯೋ?


ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್‍ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂವಿುಯಲ್ಲಿರುವ ಗವಿಯೊಳಗೆ ಹೂಣಿಟ್ಟನು.


ಯೋಸೇಫನು ನಾರು ಮಡಿಯನ್ನು ಕೊಂಡುತಂದು ಆತನನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.


ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವದು ಯಾಕೆ? ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಸೂಚಕಕಾರ್ಯವು ಸಿಕ್ಕುವದೇ ಇಲ್ಲ ಎಂದು ಹೇಳಿ


ಅವರು ಹೊರಟು ಕಾವಲುಗಾರರೊಂದಿಗೆ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಭದ್ರಮಾಡಿದರು.


ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು