Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:41 - ಕನ್ನಡ ಸತ್ಯವೇದವು J.V. (BSI)

41 ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ತೊ ಗುಂಡೊ ಕಡೆಕ್ ಕಾಡ್ಲ್ಯಾನಿ. ತನ್ನಾ ಜೆಜುನ್ ವೈರ್ ಬಗಟ್ಲ್ಯಾನ್ ಅನಿ, “ಬಾಬಾ ಮಿಯಾ ತುಕಾ ಧನ್ಯವಾದ್ ದಿತಾ ಕಶ್ಯಾಕ್ ಮಟ್ಲ್ಯಾರ್ ತಿಯಾ ಮಾಜೆ ಆಯಿಕ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:41
14 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.


ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಬಂಡೆಯಲ್ಲಿ ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೋದನು.


ಯೋಸೇಫನು ನಾರು ಮಡಿಯನ್ನು ಕೊಂಡುತಂದು ಆತನನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.


ಸಮಾಧಿಗೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವದನ್ನು ಕಂಡು


ಈಗಲಾದರೂ ದೇವರನ್ನು ಏನು ಬೇಡಿಕೊಳ್ಳುತ್ತೀಯೋ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ಬಲ್ಲೆನು ಎಂದು ಹೇಳಿದಳು.


ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು.


ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು