ಯೋಹಾನ 11:44 - ಕನ್ನಡ ಸತ್ಯವೇದವು J.V. (BSI)44 ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಮರಲ್ಲೊ ಮಾನುಸ್ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಾಕ್ನಿ ಅನಿ ಪಾಂಯಾಕ್ನಿ ಫಾಳಿಯಾ ಲಪಟಲ್ಲ್ಯಾ ಹೊತ್ತ್ಯಾ ಅನಿ ತ್ಯೆಚ್ಯಾ ತೊಂಡಾರ್ ಬಿ ಎಕ್ ಕಪ್ಡೊ ಲಪ್ಟಲ್ಲೊ ಹೊತ್ತೊ. ತನ್ನಾ ಜೆಜುನ್ ತೆಂಕಾ, “ತೆಕಾ ಲಪ್ಟಲ್ಲೊ ಕಪ್ಡೊ ಸೊಡ್ವಾ ಅನಿ ತೊ ಜಾಂವ್ದಿತ್” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |