Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:50 - ಕನ್ನಡ ಸತ್ಯವೇದವು J.V. (BSI)

50 ಜನವೆಲ್ಲಾ ನಾಶವಾಗುವದಕ್ಕಿಂತ ಒಬ್ಬ ಮನುಷ್ಯನು ಜನಕ್ಕೋಸ್ಕರ ಸಾಯುವದು ನಿಮಗೆ ಹಿತವೆಂದು ನೀವು ಆಲೋಚಿಸುವದೂ ಇಲ್ಲ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 “ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಎಣಿಸುವುದೇ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಸಗ್ಳೊ ದೆಶ್ ನಾಸ್ ಹೊತಲ್ಯಾಚ್ಯಾ ಬದ್ಲಾಕ್ , ಸಗ್ಳ್ಯಾ ಲೊಕಾಂಚ್ಯಾ ಸಾಟ್ನಿ ಎಕ್ ಮಾನುಸ್ ಮರ್‍ತಲೆ ಬರೆ ಮನುನ್ ಗೊತ್ತ್ ನಾ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:50
6 ತಿಳಿವುಗಳ ಹೋಲಿಕೆ  

ಆ ಕಾಯಫನೇ - ಒಬ್ಬ ಮನುಷ್ಯನು ಜನಕ್ಕೋಸ್ಕರ ಸಾಯುವದು ಹಿತಕರವೆಂದು ಯೆಹೂದ್ಯರಿಗೆ ಆಲೋಚನೆ ಕೊಟ್ಟವನು.


ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ


ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.


ಈ ಮಾತಿನ ದೆಸೆಯಿಂದ ಪಿಲಾತನು ಆತನನ್ನು ಬಿಡಿಸುವದಕ್ಕೆ ಪೇಚಾಡಿದನು. ಆದರೆ ಯೆಹೂದ್ಯರು - ನೀನು ಇವನನ್ನು ಬಿಡಿಸಿದರೆ ನೀನು ಕೈಸರನಿಗೆ ವಿುತ್ರನಲ್ಲ; ತನ್ನನ್ನು ಅರಸನಾಗಿ ಮಾಡಿಕೊಳ್ಳುವವನು ಕೈಸರನಿಗೆ ವಿರೋಧಿ ಎಂದು ಕೂಗಿ ಹೇಳಿದರು.


ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು