Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:55 - ಕನ್ನಡ ಸತ್ಯವೇದವು J.V. (BSI)

55 ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ಧೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಪಾಸ್ಕಾಚೊ ಸನ್ ತೊಂಡಾರ್ ಯೆತಲೊ ಹೊತ್ತೊ , ತೆಚೆಸಾಟ್ನಿ ಲೊಕಾ ಗಾವಾ ಗಾವಾನಿತ್ನಾ ಸನಾಚ್ಯಾ ಅದ್ದಿ ಶುದ್ದಾಚಾರಾಚಿ ಶಾಸ್ತರಾ ಕರುನ್ ಘೆವಸಾಟ್ನಿ ಮನುನ್ ಜೆರುಜಲೆಮಾಕ್ ಗೆಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:55
30 ತಿಳಿವುಗಳ ಹೋಲಿಕೆ  

ಪಸ್ಕಹಬ್ಬವು ಇನ್ನು ಆರು ದಿವಸ ಮುಂದೆ ಇರಲಾಗಿ ಯೇಸು ಬೇಥಾನ್ಯಕ್ಕೆ ಬಂದನು. ಯೇಸುವು ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಅಲ್ಲಿದ್ದನು.


ಆ ಕಾಲದಲ್ಲಿ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರವಾಗಿತ್ತು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತರ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಪ್ರತಿಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ನನ್ನನ್ನು ದೇವಾಲಯದಲ್ಲಿ ಕಂಡರು. ನನ್ನ ಬಳಿಯಲ್ಲಿ ಜನರ ಗುಂಪು ಇರಲಿಲ್ಲ, ಗದ್ದಲವೂ ಇರಲಿಲ್ಲ.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಇದಾದ ಮೇಲೆ ಯೆಹೂದ್ಯರದೊಂದು ಜಾತ್ರೆ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.


ಯೆಹೂದ್ಯರ ಶುದ್ಧಾಚಾರದ ಪದ್ಧತಿಯ ಪ್ರಕಾರ ಎರಡು ಮೂರು ಕೊಳಗ ನೀರು ಹಿಡಿಯುವ ಆರು ಕಲ್ಲಿನ ಬಾನೆಗಳು ಅಲ್ಲಿ ಇಟ್ಟಿದ್ದವು.


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.


ಯೇಸು ಈ ಮಾತುಗಳನ್ನೆಲ್ಲಾ ಆಡಿ ಮುಗಿಸಿದ ಮೇಲೆ ತನ್ನ ಶಿಷ್ಯರಿಗೆ -


ಯೆಹೋವನೇ, ನಾನು ನಿಷ್ಕಳಂಕನೆಂದು ಕೈಗಳನ್ನು ತೊಳೆದುಕೊಂಡವನಾಗಿ


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ ಎಂದು ಹೇಳಿ ಇಷಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.


ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ -


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.


ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.


ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಪಸ್ಕವೆಂಬ ಹಬ್ಬವು ಹತ್ತಿರವಾದಾಗ


ನೀನು ಅವರನ್ನು ಕರೆದುಕೊಂಡು ಹೋಗಿ ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ವ್ರತವನ್ನು ತೀರಿಸಿಕೊಳ್ಳುವದಕ್ಕಾಗಿ ಅವರಿಗೋಸ್ಕರ ಹಣ ವೆಚ್ಚಮಾಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ ನೀನಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ ಎಂತಲೂ ತಿಳುಕೊಳ್ಳುವರು.


ಆಗ ಪೌಲನು ಆ ಮನುಷ್ಯರನ್ನು ಕರೆದುಕೊಂಡು ಮರುದಿನ ಅವರೊಡನೆ ತನ್ನನ್ನು ಶುದ್ಧಿಮಾಡಿಕೊಂಡು ವ್ರತದ ದಿವಸಗಳು ಮುಗಿದವೆಂದು ತಿಳಿಸುವವನಾಗಿ ದೇವಾಲಯದೊಳಗೆ ಹೋದನು. ಪ್ರತಿಯೊಬ್ಬನಿಗೋಸ್ಕರ ಮಾಡಬೇಕಾದ ಅರ್ಪಣೆಯನ್ನು ಮುಂದೆ ಅರ್ಪಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು