Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:1 - ಕನ್ನಡ ಸತ್ಯವೇದವು J.V. (BSI)

1 ಪಸ್ಕಹಬ್ಬವು ಇನ್ನು ಆರು ದಿವಸ ಮುಂದೆ ಇರಲಾಗಿ ಯೇಸು ಬೇಥಾನ್ಯಕ್ಕೆ ಬಂದನು. ಯೇಸುವು ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಸ್ಕಾಚೆ ಸನಾಕ್ ಸಾ ದಿಸ್ ಹೊತ್ತೆ, ತನ್ನಾ ಜೆಜು ಭೆಥನಿ ಮನ್ತಲ್ಯಾ ಗಾಂವಾತ್, ಅಪ್ನಿ ಝಿತ್ತೊ ಕರುನ್ ಉಟ್ವಲ್ಲ್ಯಾ ಲಾಜರಾಚ್ಯಾ ಘರಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:1
13 ತಿಳಿವುಗಳ ಹೋಲಿಕೆ  

ಮತ್ತು ಆತನು ಅವರನ್ನು ಬೇಥಾನ್ಯದ ತನಕ ಕರಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.


ಇದಲ್ಲದೆ ದೇವಾರಾಧನೆ ಮಾಡಬೇಕೆಂದು ಜಾತ್ರೆಗೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.


ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು.


ಬೇಥಾನ್ಯದ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಅದು ಮಾರ್ಥಳು ಮರಿಯಳು ಎಂಬ ಅಕ್ಕತಂಗಿಯರು ಇದ್ದ ಊರು.


ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಇಳುಕೊಂಡನು.


ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.


ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯಕ್ಕೆ ಹೋಗಿ ಸುತ್ತಲೂ ಎಲ್ಲಾ ನೋಡಿಕೊಂಡು ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರಕೊಂಡು ಬೇಥಾನ್ಯಕ್ಕೆ ಹೊರಟುಹೋದನು.


ಆಗ ಆ ಊರಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಒರಗಿದ್ದಾನೆಂದು ಗೊತ್ತುಹಿಡುಕೊಂಡು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು


ಅದನ್ನು ಹೇಳಿದ ಮೇಲೆ ದೊಡ್ಡ ಶಬ್ದದಿಂದ - ಲಾಜರನೇ, ಹೊರಗೆ ಬಾ ಎಂದು ಕೂಗಿದನು.


ಯೆಹೂದ್ಯರ ಜನಸಮೂಹವು ಆತನು ಅಲ್ಲಿ ಇದ್ದಾನೆಂದು ತಿಳಿದು ಯೇಸುವನ್ನು ನೋಡುವದಕ್ಕಾಗಿ ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನು ಸಹ ನೋಡಬೇಕೆಂಬದಾಗಿ ಬಂದರು.


ಮರುದಿವಸ ಜಾತ್ರೆಗೆ ಬಂದಿದ್ದ ಜನಸಮೂಹವು ಯೇಸು ಯೆರೂಸಲೇವಿುಗೆ ಬರುತ್ತಾನೆಂದು ಕೇಳಿ ಖರ್ಜೂರದ ಗರಿಗಳನ್ನು ತಕ್ಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು