Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:16 - ಕನ್ನಡ ಸತ್ಯವೇದವು J.V. (BSI)

16 ಇದು ಆತನ ಶಿಷ್ಯರಿಗೆ ಮೊದಲು ತಿಳಿದಿರಲಿಲ್ಲ. ಆದರೆ ಯೇಸು ತನ್ನ ಮಹಿಮೆಯ ಪದವಿಗೆ ಬಂದ ಮೇಲೆ ಇದು ಆತನ ವಿಷಯವಾಗಿಯೇ ಬರೆದದೆ ಎಂದೂ ಆತನಿಗೆ ನಾವು ಅದನ್ನೆಲ್ಲಾ ಮಾಡಿದೆವೆಂದೂ ಅವರ ನೆನಪಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತ್ಯಾ ಎಳಾರ್ ಹೆ ಸಗ್ಳೆ ಕಾಯ್ ಮನುನ್ ತ್ಯೆಚ್ಯಾ ಶಿಸಾಕ್ನಿ ಕಳುಕ್ ನಾ, ಖರೆ ಜೆಜುಕ್ ಮಹಿಮೆನ್ ಉಟ್ವಲ್ಲ್ಯಾ ತನ್ನಾ ತೆಕಾ ಕಳ್ಳೆಕಿ ಪವಿತ್ರ್ ಪುಸ್ತಕಾತ್ ತ್ಯೆಚ್ಯಾ ವಿಶಯಾತ್ ಸಾಂಗಲ್ಲ್ಯಾ ಸಾರ್ಕೆಚ್ ತೆನಿ ತೆಕಾ ಕರ್ಲ್ಯಾನಿ ಮನುನ್ ತೆಂಕಾ ಯಾದ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:16
19 ತಿಳಿವುಗಳ ಹೋಲಿಕೆ  

ಆದದರಿಂದ ಆತನು ಸತ್ತು ಬದುಕಿ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಶಾಸ್ತ್ರದಲ್ಲಿ ಬರೆದದ್ದನ್ನೂ ಆತನ ಮಾತನ್ನೂ ಅವರು ನಂಬುವವರಾದರು.


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ಆ ಕಾಲ ಬಂದಾಗ ಆತನು ನಮಗೆ ಇಂಥಿಂಥದನ್ನು ಹೇಳಿದನಲ್ಲಾ ಎಂದು ನೀವು ನೆನಪಿಗೆ ತರುವಂತೆ ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ಗೊತ್ತಾಗಲಿಲ್ಲ.


ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.


ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು