Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:2 - ಕನ್ನಡ ಸತ್ಯವೇದವು J.V. (BSI)

2 ಯೇಸುವಿಗೆ ಅಲ್ಲಿ ಔತಣಮಾಡಿಸಲು ಮಾರ್ಥಳು ನೆರವಾಗಿದ್ದಳು; ಲಾಜರನು ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಯೇಸುವಿಗೆ ರಾತ್ರಿಭೋಜನವನ್ನು ಏರ್ಪಡಿಸಿದ್ದರು. ಮಾರ್ಥಳು ಊಟವನ್ನು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟ ಮಾಡುತ್ತಿದ್ದವರಲ್ಲಿ ಲಾಜರನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ತೆಕಾ ಥೈ ಜೆವಾನ್ ತಯಾರ್ ಕರಲ್ಲ್ಯಾನಿ, ಮಾರ್ಥಾ ರಾಚ್ಚೆ ಜೆವಾನ್ ವಾಡುಕ್ ಮಜತ್ ಕರಿ. ಲಾಜರ್ ಜೆಜುಚ್ಯಾ ವಾಂಗ್ಡಾ ಜೆವ್ನಾಚ್ಯಾ ಪಂಗ್ತಿರ್ ಬಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:2
12 ತಿಳಿವುಗಳ ಹೋಲಿಕೆ  

ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.


ಆತನು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಇದ್ದು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಆ ಭರಣಿಯನ್ನು ಒಡೆದು ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.


ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿಸಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಅವರ ಸಂಗಡ ಊಟಕ್ಕೆ ಕೂತುಕೊಂಡಿದ್ದರು.


ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದಾಗ ಒಬ್ಬ ಸ್ತ್ರೀಯು


ಬಡಗಣ ಗಾಳಿಯೇ ಬೀಸು, ತೆಂಕಣ ಗಾಳಿಯೇ ಬಾ! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು