Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:32 - ಕನ್ನಡ ಸತ್ಯವೇದವು J.V. (BSI)

32 ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮಾಕಾ ಕನ್ನಾ ಜಮ್ನಿ ವೈನಾ ವೈರ್ ಉಕ್ಲುನ್ ಹೊಲ್ಲ್ಯಾ ತನ್ನಾ ಮಿಯಾ ಸಗ್ಳ್ಯಾ ಲೊಕಾನಿ ಮಾಜ್ಯಾಕ್ಡೆ ವೊಡುನ್ ಘೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:32
23 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ಇದಲ್ಲದೆ [ಜನರು ನೋಡಿ ಜೀವದಿಂದುಳಿಯಬೇಕೆಂದು] ಮೋಶೆಯು ಅಡವಿಯಲ್ಲಿ ಆ ಸರ್ಪವನ್ನು ಎತ್ತರದಲ್ಲಿಟ್ಟ ಹಾಗೆಯೇ


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಎಳೆದ ಹೊರತು ಯಾವನೂ ನನ್ನ ಬಳಿಗೆ ಬರಲಾರನು; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.


ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು; ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ ಅವರಿಗೆ ತೀನಿಯನ್ನು ನಯದಿಂದ ಇಕ್ಕಿದೆನು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಅವರು ಯೇಸುವನ್ನು ತೆಗೆದುಕೊಂಡು ಹೋದರು; ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ಕಪಾಲಸ್ಥಳವೆಂಬ ಸ್ಥಾನಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ ಗೊಲ್ಗೊಥಾ ಎಂದು ಹೆಸರು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಇದರಿಂದ ಯೇಸು ತಾನು ಎಂಥಾ ಸಾವು ಸಾಯುವೆನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ಆದಕಾರಣ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು