Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:34 - ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ತ್ಯಾ ಲೊಕಾಂಚ್ಯಾ ತಾಂಡ್ಯಾನ್, “ಅಮ್ಚೊ ಖಾಯ್ದೊ ಮೆಸ್ಸಿಯಾಕ್ ಕನ್ನಾಚ್ ಮರಾನ್ ನಾ ಮನ್ತಾ, ತಸೆಜಾಲ್ಯಾರ್ ಮಾನ್ಸಾಚ್ಯಾ ಲೆಕಾಕ್ ವೈರ್ ಉಕ್ಲುನ್ ಹೊತಾ ಮನುನ್ ತಿಯಾ ಕಶೆ ಮನ್ತೆಯ್? ಮಾನ್ಸಾಚೊ ಲೆಕ್ ಮಟ್ಲ್ಯಾರ್ ತೊ ಕೊನ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:34
26 ತಿಳಿವುಗಳ ಹೋಲಿಕೆ  

ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ.


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಅವನ ದಿವಸಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.


ಅದಕ್ಕೆ ಯೇಸು - ನೀವು ದೇವರುಗಳೇ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದದೆಯಲ್ಲಾ; ಶಾಸ್ತ್ರವು ಸುಳ್ಳಾಗಲಾರದಷ್ಟೆ;


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ಆತನು ಯೆರೂಸಲೇಮನ್ನು ಸೇರಲು ಪಟ್ಟಣವೆಲ್ಲಾ ಗದ್ದಲವಾಗಿ, ಈತನು ಯಾರು? ಅಂದರು.


ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ - ಜನರು ಮನುಷ್ಯಕುಮಾರನೆಂಬ ನನ್ನನ್ನು ಯಾರು ಅನ್ನುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ ಅವರು -


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ಆತನಾದರೋ ಸದಾಕಾಲವಿರುವದರಿಂದ ಆತನ ಯಾಜಕತ್ವವು ಮತ್ತೊಬ್ಬರಿಗೆ ಹೋಗುವಂಥದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು