Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:35 - ಕನ್ನಡ ಸತ್ಯವೇದವು J.V. (BSI)

35 ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಜೆಜುನ್, “ಅನಿ ಉಲ್ಲೊಸೊಚ್ ಎಳ್ ಉಜ್ವೊಡ್ ತುಮ್ಚ್ಯಾ ಮದ್ದಿ ರ್‍ಹಾತಾ, ಉಜ್ವೊಡ್ ತುಮ್ಚ್ಯಾ ಮದ್ದಿ ರ್‍ಹಾತಾನಾಚ್ ತುಮಿ ತುಮ್ಚಿ ಫಿಡ್ಲಿ ವಾಟ್ ಚಲಾ, ಅಶೆಚ್ ಕಾಳೊಕಾಕ್ ತುಮ್ಚ್ಯಾವರ್ತಿ ಯೆವ್ಕ್ ಹೊಯ್ನಾ ಕಾಳ್ಕಾತ್ ಚಲ್ತಲ್ಯಾಕ್ ತೊ ಖೈ ಜಾವ್ಕ್ ಲಾಗ್ಲಾ ಮನುನ್ ಗೊತ್ತ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:35
27 ತಿಳಿವುಗಳ ಹೋಲಿಕೆ  

ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ರಾತ್ರಿಯಲ್ಲಿ ತಿರುಗಾಡಿದರೆ ಅವನಿಗೆ ಬೆಳಕಿಲ್ಲದ್ದರಿಂದ ಎಡವುವನು ಎಂದು ಉತ್ತರಕೊಟ್ಟನು.


ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ; ನಂಬಿದರೆ ನೀವು ಬೆಳಕಿನವರಾಗುವಿರಿ ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.


ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ!


ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಇಳುಮೇಡುಗಳಿಗೆ ಸಮಾನವಾಗುವದು; ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರುಷದ ಕೇಡನ್ನು ಬರಮಾಡುವೆನು. ಇದು ಯೆಹೋವನ ನುಡಿ.


ಯೇಸು - ಹಗಲಿಗೆ ಹನ್ನೆರಡು ತಾಸು ಉಂಟಲ್ಲವೇ. ಒಬ್ಬನು ಹಗಲಲ್ಲಿ ತಿರುಗಾಡಿದರೆ ಈ ಲೋಕದ ಬೆಳಕು ಕಾಣಿಸುವದರಿಂದ ಆತನು ಎಡವುವದಿಲ್ಲ;


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು