Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:40 - ಕನ್ನಡ ಸತ್ಯವೇದವು J.V. (BSI)

40 ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 “ದೆವಾನ್ ತುಮ್ಚೆ ಡೊಳೆ ಕುಡ್ಡೆ ಕರ್‍ಲ್ಯಾನಾಯ್ ಅನಿ ತೆಂಚಿ ಮನಾಂಚಿ ದಾರಾ ಧಾಪ್ಲ್ಯಾನಾಯ್” “ತಸೆಮನುನ್ ತೆಂಚ್ಯಾ ಡೊಳ್ಯಾಕ್ನಿ ದಿಸಿನಾ ಅನಿ ತೆಂಚ್ಯಾ ಮನಾಕ್ನಿ ಕಾಯ್ ಬಿ ಅರ್ತ್ ಹೊಯ್ನಾ ಅನಿ ಮಿಯಾ ತೆಂಕಾ ಗುನ್ ಕರುಕ್ ಮನುನ್ ತೆನಿ ಮಾಜಾಕ್ಡೆ ಪರ್ತುನ್ ಯೆಯ್ನಾತ್ ಮನುನ್ ದೆವ್ ಮನ್ತಾ.” ಮನುನ್ ಬಿ ಸಾಂಗಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:40
44 ತಿಳಿವುಗಳ ಹೋಲಿಕೆ  

ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ಅವರು ಕಣ್ಣಿದ್ದು ನೋಡಿದರೂ ಕಾಣಬಾರದು, ಕಿವಿಯಿದ್ದು ಕೇಳಿದರೂ ತಿಳುಕೊಳ್ಳಬಾರದು, ಹಾಗೆ ಕಂಡು ತಿಳುಕೊಂಡರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದಾರು ಎಂದೇ ಮರೆಮಾಡಲಾಗಿದೆ.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ; ಅವರ ಗಾಯಗಳನ್ನು ಕಟ್ಟುತ್ತಾನೆ.


ನಾನಂತೂ - ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು ಅಂದೆನು.


ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ.


ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.


ನಿಮ್ಮ ಪಿತೃಗಳಿಗೆ ವಿಹಿತವಾಗಿ ಹೇಳಿದ್ದೇನಂದರೆ - ನೀನು ಈ ಜನರ ಬಳಿಗೆ ಹೋಗಿ ಅವರಿಗೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ ಎಂಬದಾಗಿ ಹೇಳು.


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲ್ಯರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢಜನರೇ, ಯೆಹೋವನ ಈ ಮಾತನ್ನು ಕೇಳಿರಿ -


ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಯಾಕಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಲಿಲ್ಲ; ಅವರ ಮನಸ್ಸು ಕಲ್ಲಾಗಿತ್ತು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.


ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ಯೆಹೋವನು ಮೊದಲು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು; ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಟವನ್ನು ಹುಟ್ಟಿಸಿ ಐಗುಪ್ತ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ನಡಿಸಿ ನನ್ನ ಶಕ್ತಿಯನ್ನು ತೋರಿಸುವೆನು.


ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ.


ಯೆಹೋವನು ತನ್ನ ಹತ್ತಿರ ನಿಂತವರನ್ನು - ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರ ಕೊಟ್ಟರು.


ಆದರೂ ಯೆಹೋವನು ಮೋಶೆಗೆ ಹೇಳಿದ್ದಂತೆಯೇ ಆಯಿತು; ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆಹೋದನು.


ತರುವಾಯ ಯೆಹೋವನು ಮೋಶೆಗೆ ಇಂತೆಂದನು - ಫರೋಹನ ಬಳಿಗೆ ತಿರಿಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ಈ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆಸ್ಪದವಾಗುವದಕ್ಕೂ


ಮೋಶೆ ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದಾಗ್ಯೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಫರೋಹನು ಇಸ್ರಾಯೇಲ್ಯರಿಗೆ ತನ್ನ ದೇಶವನ್ನು ಬಿಟ್ಟು ಹೊರಡುವದಕ್ಕೆ ಅಪ್ಪಣೆ ಕೊಡದೆಹೋದನು.


ಅದಕ್ಕೆ ಆತನು - ನೀನು ಈ ಜನರ ಬಳಿಗೆ ಹೋಗಿ - ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,


ಅವರು ನಂಬಲಾರದೆ ಹೋದದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ; ಅದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು