Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:41 - ಕನ್ನಡ ಸತ್ಯವೇದವು J.V. (BSI)

41 ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಶಾಯನು ಆತನ (ಯೇಸುವಿನ) ಮಹಿಮೆಯನ್ನು ನೋಡಿದ್ದರಿಂದಲೇ ಹೀಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಇಸಾಯಿಯಾನ್ ತಸೆ ಸಾಂಗಲ್ಲೆ ಕಾಯ್ ಮಟ್ಲ್ಯಾರ್ ಜೆಜುಚಿ ಮಹಿಮಾ ಬಗಟಲ್ಲ್ಯಾನ್ ತಸೆಮನುನ್ ತೆನಿ ಅಶೆಚ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:41
13 ತಿಳಿವುಗಳ ಹೋಲಿಕೆ  

ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ?


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು