Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:42 - ಕನ್ನಡ ಸತ್ಯವೇದವು J.V. (BSI)

42 ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಉಲ್ಲೆ ಜುದೆವಾಂಚೆ ಅದಿಕಾರಿಬಿ ಜೆಜುವರ್ತಿ ವಿಶ್ವಾಸ್ ಕರಿತ್ ಖರೆ ಫಾರಿಜೆವಾಕ್ನಿ ಲಾಗುನ್ ತೆನಿ ತೊ ವಿಶ್ವಾಸ್ ದಾಕ್ವುನ್ ದಿ ನಸಿತ್ ಅಶೆಚ್ ಸಿನಾಗೊಗಾನಿತ್ನಾ ಭಾಯ್ರ್ ಘಾಲ್ತಲೆ ತೆಂಕಾ ನಕ್ಕೊ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:42
25 ತಿಳಿವುಗಳ ಹೋಲಿಕೆ  

ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.


ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಧಾರಾಳವಾಗಿ ಮಾತಾಡಲಿಲ್ಲ.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ಯೇಸು ದೇವರ ಮಗನಾಗಿದ್ದಾನೆಂದು ಯಾವನು ಒಪ್ಪಿಕೊಂಡು ಹೇಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.


ಪ್ರೇರಿಸುವಂಥವನು ದೇವರ ಆತ್ಮನೇ ಎಂದು ತಿಳಿದುಕೊಳ್ಳುವದಕ್ಕೆ ಲಕ್ಷಣವೇನಂದರೆ - ಮನುಷ್ಯನಾಗಿ ಬಂದ ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದದ್ದು.


ಹೃದಯದಿಂದ ನಂಬುವದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು - ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಬೇಡಿಕೊಂಡನು. ಪಿಲಾತನು ಅಪ್ಪಣೆಕೊಡಲಾಗಿ ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಯಾಕಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಹೋಗಿ ಯೇಸುವನ್ನು ನಂಬುವವರಾದರು.


ಮರಿಯಳ ಬಳಿಗೆ ಬಂದ ಯೆಹೂದ್ಯರು ಆತನು ಮಾಡಿದ ಕಾರ್ಯವನ್ನು ನೋಡಿದಾಗ ಅವರಲ್ಲಿ ಅನೇಕರು ಆತನನ್ನು ನಂಬಿದರು;


ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ ಮನುಷ್ಯಕುಮಾರನು ಸಹ ಅವನನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ನೀನು ಯಾರಿಗೆ ಬೆದರಿ ಹೆದರಿದ್ದರಿಂದ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೆ.


ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು


ತರುವಾಯ ಪಿಲಾತನು ಮಹಾಯಾಜಕರನ್ನೂ ಅಧಿಕಾರಿಗಳನ್ನೂ ಪ್ರಜೆಗಳನ್ನೂ ಒಟ್ಟಾಗಿ ಕರಸಿ


ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು