Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:43 - ಕನ್ನಡ ಸತ್ಯವೇದವು J.V. (BSI)

43 ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಈ ಜನರು ದೇವರ ಹೊಗಳಿಕೆಗಿಂತಲೂ ಜನರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತೆನಿ ದೆವಾಚ್ಯಾ ಶಾಬಾಸ್ಕಿನ್ಬಿ ಜಾಸ್ತಿ ಮಾನ್ಸಾಚ್ಯಾ ಶಾಬಾಸ್ಕಿಕ್ ಪ್ರೆಮ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:43
20 ತಿಳಿವುಗಳ ಹೋಲಿಕೆ  

ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ.


ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಜಡೆಹೆಣೆದುಕೊಳ್ಳುವದು ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದು ವಸ್ತ್ರಗಳನ್ನು ಧರಿಸಿಕೊಳ್ಳುವದು ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣುಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.


ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು