Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:44 - ಕನ್ನಡ ಸತ್ಯವೇದವು J.V. (BSI)

44 ಯೇಸು ಕೂಗಿ ಹೇಳಿದ ಮಾತು ಏನಂದರೆ - ನನ್ನನ್ನು ನಂಬಿದವನು ನನ್ನನ್ನೇ ನಂಬುವವನಲ್ಲ; ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಬಳಿಕ ಯೇಸು ಗಟ್ಟಿಯಾಗಿ ಹೀಗೆಂದನು: “ನನ್ನಲ್ಲಿ ನಂಬಿಕೆ ಇಡುವವನು ನನ್ನನ್ನು ಕಳುಹಿಸಿದಾತನಲ್ಲಿ (ದೇವರು) ನಿಜವಾಗಿಯೂ ನಂಬಿಕೆ ಇಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಜೆಜುನ್ ಮೊಟ್ಯಾ ಅವಾಜಾನ್ ಸಾಂಗಲ್ಲ್ಯಾನ್ “ಜೊ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾ ತೊ ಖಾಲಿ ಮಾಜೆವರ್ತಿ ಎವ್ಡೆಚ್ ನ್ಹಯ್ ಮಾಕಾ ಧಾಡುನ್ ದಿಲ್ಲ್ಯಾಚ್ಯಾ ವರ್‍ತಿಬಿ ವಿಶ್ವಾಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:44
11 ತಿಳಿವುಗಳ ಹೋಲಿಕೆ  

ನಿಮ್ಮನ್ನು ಸೇರಿಸಿಕೊಳ್ಳುವವನು ನನ್ನನ್ನು ಸೇರಿಸಿಕೊಳ್ಳುವವನಾಗಿದ್ದಾನೆ; ನನ್ನನ್ನು ಸೇರಿಸಿಕೊಳ್ಳುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಳ್ಳುವವನಾಗಿದ್ದಾನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು ಎಂದು ಹೇಳಿದನು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.


ಅದನ್ನು ಹೇಳಿದ ಮೇಲೆ ದೊಡ್ಡ ಶಬ್ದದಿಂದ - ಲಾಜರನೇ, ಹೊರಗೆ ಬಾ ಎಂದು ಕೂಗಿದನು.


ಜ್ಞಾನವೆಂಬಾಕೆಯು ಕರೆಯುತ್ತಾಳೆ, ವಿವೇಕವೆಂಬ ಆಕೆಯೇ ದನಿಗೈಯುತ್ತಾಳೆ.


ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ದನಿಗೈಯುತ್ತಾಳೆ.


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು