Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:46 - ಕನ್ನಡ ಸತ್ಯವೇದವು J.V. (BSI)

46 ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಮಿಯಾ ಹ್ಯಾ ಜಗಾಕ್ ಎಕ್ ಉಜ್ವೊಡ್ ಹೊವ್ನ್ ಯೆಲಾ. ತೆಚೆಸಾಟ್ನಿ ಮಾಜೆವರ್ತಿ ವಿಶ್ವಾಸ್ ಕರ್‍ತಲೊ ಕೊನ್ ಬಿ ಕಾಳ್ಕಾತ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:46
19 ತಿಳಿವುಗಳ ಹೋಲಿಕೆ  

ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ ಅಂದನು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು