Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:47 - ಕನ್ನಡ ಸತ್ಯವೇದವು J.V. (BSI)

47 ಯಾವನಾದರೂ ನನ್ನ ಮಾತುಗಳನ್ನು ಕೇಳಿದರೂ ಕೈಕೊಂಡು ನಡೆಯದೆ ಹೋದರೆ ನಾನೇ ಅವನಿಗೆ ತೀರ್ಪುಮಾಡುವದಿಲ್ಲ; ಲೋಕಕ್ಕೆ ತೀರ್ಪುಮಾಡುವದಕ್ಕಾಗಿ ನಾನು ಬಂದಿಲ್ಲ; ಲೋಕವನ್ನು ರಕ್ಷಿಸುವದಕ್ಕಾಗಿ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಕೊನ್ ಮಾಜಿ ಗೊಸ್ಟಿಯಾ ಆಯ್ಕುನ್ ತಿ ಪಾಳಿನಾ, ಮಿಯಾ ತೆಚಿ ನಿತ್ ಕರಿನಾ. ಕಶ್ಯಾಕ್ ಮಟ್ಲ್ಯಾರ್ ಜಗಾಚಿ ನಿತ್ ಕರುಕ್ ಮನುನ್ ಮಿಯಾ ಯೆವ್ಕ್ ನಾ, ಜಗಾಕ್ ಹುರ್‍ವುನ್ ಘೆವ್ಕ್ ಮನುನ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:47
13 ತಿಳಿವುಗಳ ಹೋಲಿಕೆ  

ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.


ನನ್ನನ್ನು ಲಕ್ಷ್ಯಮಾಡದೆ ನನ್ನ ಮಾತುಗಳನ್ನು ಅಂಗೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದು ಒಂದು ಇದೆ, ಅದು ಯಾವದಂದರೆ, ನಾನು ಆಡಿದ ಮಾತು; ಅದೇ ಅವನಿಗೆ ಕಡೇ ದಿನದಲ್ಲಿ ತೀರ್ಪುಮಾಡುವದು.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ನಾನು ತಂದೆಯ ಮುಂದೆ ನಿಮ್ಮ ಮೇಲೆ ತಪ್ಪುಹೊರಿಸುವೆನೆಂದು ನೆನಸಬೇಡಿರಿ; ನೀವು ಆಶ್ರಯಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ತಪ್ಪುಹೊರಿಸುವವನು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.


ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಆಗ ಅವರೆಲ್ಲರು ಬೇರೆ ಹಳ್ಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು