Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:49 - ಕನ್ನಡ ಸತ್ಯವೇದವು J.V. (BSI)

49 ಯಾಕಂದರೆ ನನ್ನಷ್ಟಕ್ಕೆ ನಾನೇ ಮಾತಾಡಿದವನಲ್ಲ; ನನ್ನನ್ನು ಕಳುಹಿಸಿಕೊಟ್ಟ ತಂದೆಯೇ - ನೀನು ಇಂಥಿಂಥದನ್ನು ಹೇಳಬೇಕು, ಹೀಗೆ ಹೀಗೆ ಮಾತಾಡಬೇಕು ಎಂಬದಾಗಿ ನನಗೆ ಆಜ್ಞೆಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಏಕೆಂದರೆ, ನನ್ನ ಮಾತುಗಳು ನನ್ನಿಂದ ಬಂದವುಗಳಲ್ಲ. ನನ್ನನ್ನು ಕಳುಹಿಸಿದ ತಂದೆಯೇ ನಾನು ಏನು ಹೇಳಬೇಕು, ಏನು ಮಾತಾಡಬೇಕು ಎಂದು ನನಗೆ ಹೇಳಿಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಹೆ ಖರೆಚ್! ಹಾಯ್ ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಕಾಯ್ ಬೊಲುಕ್ನಾ, ಮಾಕಾ ಧಾಡುನ್ ದಿಲ್ಲ್ಯಾ ಮಾಜ್ಯಾ ಬಾಬಾನ್ ಹುಕುಮಾ ಸರ್ಕೆ ಸಾಂಗುಚೆ ಅನಿ ಬೊಲುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:49
17 ತಿಳಿವುಗಳ ಹೋಲಿಕೆ  

ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.


ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ತಾನು ನೋಡಿ ಕೇಳಿದ್ದಕ್ಕೆ ಸಾಕ್ಷಿಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾರೂ ಒಪ್ಪುವದಿಲ್ಲ.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ತಿಳಿದದ್ದನ್ನು ಹೇಳುತ್ತೇವೆ, ನೋಡಿದ್ದಕ್ಕೆ ಸಾಕ್ಷಿಕೊಡುತ್ತೇವೆ; ನೀವು ನಮ್ಮ ಸಾಕ್ಷಿಯನ್ನು ಒಪ್ಪುವದಿಲ್ಲ.


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಅದಕ್ಕೆ ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡು ಮಗನು ಮಾಡುತ್ತಾನೆ ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುತ್ತಾನೆ.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ಅದಕ್ಕೆ ಯೇಸು - ನಾನು ಹೇಳುವ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದಾತನದು.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತುಗಳನ್ನು ಕೈಕೊಂಡು ನಡೆಯುವದಿಲ್ಲ; ನೀವು ಆಲಿಸುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯ ಮಾತೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು