ಯೋಹಾನ 13:18 - ಕನ್ನಡ ಸತ್ಯವೇದವು J.V. (BSI)18 ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 “ಮಿಯಾ ತುಮ್ಚ್ಯಾ ಸಗ್ಳ್ಯಾಂಚ್ಯಾಚ್ ವಿಶಯಾತ್ ಬೊಲಿನಾ ಹೊಲಾ, ಮಿಯಾ ಎಚುನ್ ಕಾಡಲ್ಲ್ಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್, ಖರೆ ಪವಿತ್ರ್ ಪುಸ್ತಕಾತ್ ಮಾಜ್ಯಾ ವಾಂಗ್ಡಾ ಎಕುಚ್ ಭಾನ್ಯಾತ್ ಜೆವಲ್ಲೊ ಮಾಜೆ ವರ್ತಿ ಪರತ್ತಾ ” ಮನುನ್ ಲಿವಲ್ಲೆ ಖರೆ ಹೊವ್ಕ್ ಪಾಜೆ. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.