Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:19 - ಕನ್ನಡ ಸತ್ಯವೇದವು J.V. (BSI)

19 ಅದು ನಡೆಯುವಾಗ ನನ್ನನ್ನೇ ಆತನೆಂದು ನೀವು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆ ಅದನ್ನು ಇಂದಿನಿಂದ ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದು ಈಡೇರುವಾಗ ‘ಇರುವಾತನು ನಾನೇ’ ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸಗ್ಳೆ ಘಡುಚ್ಯಾ ಅದ್ದಿಚ್ ಹೆ ಸಗ್ಳೆ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ, ಕಶ್ಯಾಕ್ ಮಟ್ಲ್ಯಾರ್, ಹೆ ಘಡಲ್ಲ್ಯಾ ತನ್ನಾ, ಮನುನ್ ತುಮಿ ವಿಶ್ವಾಸ್ ಕರುಚೆ ಮಿಯಾಚ್ ತೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:19
15 ತಿಳಿವುಗಳ ಹೋಲಿಕೆ  

ಅದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ ಅದು ನಡೆಯುವದಕ್ಕಿಂತ ಮುಂಚೆಯೇ ಈಗ ನಿಮಗೆ ಹೇಳಿದ್ದೇನೆ.


ಯೆಹೋವನ ಮಾತೇನಂದರೆ - ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು; ನೀವು ನನ್ನನ್ನು ತಿಳಿದು ನಂಬಿ ನನ್ನನ್ನೇ ಪರಮಾತ್ಮನು ಎಂದು ಗ್ರಹಿಸುವ ಹಾಗೆ [ಇದನ್ನು ನಡಿಸಿದೆನು]; ನನಗಿಂತ ಮುಂಚೆ ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವದಿಲ್ಲ.


ಆ ಕಾಲ ಬಂದಾಗ ಆತನು ನಮಗೆ ಇಂಥಿಂಥದನ್ನು ಹೇಳಿದನಲ್ಲಾ ಎಂದು ನೀವು ನೆನಪಿಗೆ ತರುವಂತೆ ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ಅದರಿಂದಲೇ ಈ ಕಾರ್ಯಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ಬೊಂಬೆ, ಎರಕದ ಪುತ್ತಳಿ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು, ನಡೆಯುವದಕ್ಕೆ ಮುಂಚೆಯೇ ಪ್ರಕಟಿಸಿದೆನು.


ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.


ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ.


ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೋಹಾನನು ಆತನ ವಿಷಯವಾಗಿ ಸಾಕ್ಷಿಕೊಡುತ್ತಾನೆ; ಹೇಗಂದರೆ - ನನ್ನ ಹಿಂದೆ ಬರುವವನು ನನಗಿಂತ ಮೊದಲೇ ಇದ್ದದರಿಂದ ನನಗೆ ಮುಂದಿನವನಾದನು ಎಂಬದಾಗಿ ನಾನು ಹೇಳಿದವನು ಈತನೇ ಎಂದು ಕೂಗಿ ಹೇಳಿದ್ದಾನೆ.


ಇದು ಸಾಕ್ಷಿಹೇಳುವದಕ್ಕೆ ನಿಮಗೆ ಅನುಕೂಲವಾಗುವದು.


ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದಾಗತಕ್ಕವುಗಳನ್ನು ತಿಳಿಸಿರಿ; ನಾವು ಒಟ್ಟಿಗೆ ಕಕ್ಕಾಬಿಕ್ಕಿಯಾಗಿ ನೋಡುವಂತೆ ಮೇಲಾಗಲಿ ಕೇಡಾಗಲಿ ಏನಾದರೂ ಮಾಡಿರಿ.


ಯೇಸು ಆಕೆಗೆ - ನಿನ್ನ ಸಂಗಡ ಮಾತಾಡುತ್ತಿರುವ ನಾನೇ ಆ ಮೆಸ್ಸೀಯನು ಎಂದು ಹೇಳಿದನು.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು